ಎಸ್ಸೆಸ್ಸೆಲ್ಸಿ ಫಲಿತಾಂಶ:ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಮೋಘ ಸಾಧನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.11:ವಿಜಯಪುರ ನಗರದ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 99ರಷ್ಟು ಅಮೋಘ ಸಾಧನೆ ಮಾಡಿದ್ದಾರೆ.
ಅಂಜನ್ ಪವಾರ 625 ಕ್ಕೆ 611 ಅಂಕಗಳನ್ನು ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಅನಿಲಕುಮಾರ್ ಪಟೇದ 625 ಕ್ಕೆ 601 ಅಂಕ ಪಡೆದುಕೊಂಡು ದ್ವಿತೀಯ ಸ್ಥಾನ, ಅಕ್ಷತಾ ದೊಡಮನಿ 625 ಕ್ಕೆ 600 ಮತ್ತು ಶ್ರೀದೇವಿ ಮಾಳಜಿ 600 ಅಂಕಗಳನ್ನು ಪಡೆದುಕೊಂಡು ಶಾಲೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ದ್ವಿತೀಯ ಭಾμÉ ಕನ್ನಡದಲ್ಲಿ 4 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದುಕೊಂಡಿದ್ದಾರೆ. 48 ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ, ಉಪಾಧ್ಯಕ್ಷ ರೋಹಿತ ಜುಗತಿ, ನಿರ್ದೇಶಕ ಡಾ, ನಾಗರಾಜ ಹೇರಲಗಿ, ಸಹಾಯಕ ಆಡಳಿತ ಅಧಿಕಾರಿ ಪ್ರಮೋದ ಕುಲಕರ್ಣಿ, ಮುಖ್ಯೋಪಾಧ್ಯಾಯ ಪೆÇ್ರ. ಎ. ಎಚ್. ಕೊಳಮಲಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.