ಸಂಗಾಪುರ: ಬಾವಿಯಲ್ಲಿ ಯುವಕನ ಶವ ಪತ್ತೆ
ಕಲಬುರಗಿ,ಮೇ.10-ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸಂಗಾಪುರ ಗ್ರಾಮದ ಬಾವಿಯೊಂದರಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಜಾವೇದ್ ತಂದೆ ದಸ್ತಗೀರ್ (25) ಎಂಬ ಯುವಕನ ಶವ ಪತ್ತೆಯಾಗಿದ್ದು, ಈ ಸಂಬಂಧ ಜಾವೇದ್ ತಾಯಿ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಚಾಲಕನಾಗಿ ಕೆಲಸ ಮಾಡುತ್ತಿದ್ದ ಜಾವೇದ್ ಚುನಾವಣೆಯ ದಿನ ರಾತ್ರಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ದೇವಲಗಾಣಗಾಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.