ವಚನ ಸಾಹಿತ್ಯದ ಮೂಲಕ ಸಾಮಾಜಿಕ. ಕ್ರಾಂತಿ ಮಾಡಿದವರು ಶ್ರೀ ಬಸವೇಶ್ವರರು ; ಜಿಲ್ಲಾಧಿಕಾರಿ
ಕಲಬುರಗಿ:ಮೇ.10: 12ನೇ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿ ಸಮಾನತೆ ಸಂದೇಶ ಸಾರಿ ಜನರಲ್ಲಿ ನಾವೆಲ್ಲ ಒಂದು ಎನ್ನುವ ಅರಿವು ಮೂಡಿಸಿಧವರು ವಿಶ್ವಗುರು ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾದಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಶುಕ್ರವಾರದಂದು ಜಗತ್ತ ವೃತ್ತದಲ್ಲಿರುವ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವಣ್ಣ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿ
ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಮೂಡನಂಬಿಕೆ ಕಂದಾಚಾರ ಮೌಢ್ಯತೆಗಳನ್ನು ಹೋಗಲಾಡಿಸಲು ಪ್ರಯತ್ನಿಸಿದ್ದಾರೆ ಅವರ ಆದರ್ಶ ತತ್ವಗಳನ್ನು ಸಿದ್ದಾಂತಗಳು ನಾವು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಚುನಾವಣೆ ನೀತಿ ಸಂಹಿತೆ ಇದ್ದರೂ ಕೂಡ ಪ್ರತಿವರ್ಷದಂತೆ ಈ ವರ್ಷವೂ ಬಸವೇಶ್ವರ ಜಯಂತಿ ಆಚರಿಸುವುದು ತುಂಬಾ ಸಂತೋಷ ತಂದಿದೆ ಎಂದರು.
ಸುಲಫಲಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ನಗರ ಪೆÇೀಲಿಸ್ ಆಯುಕ್ತ ಚೇತನ್ ಆರ್. ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿ ಅಕ್ಷಯ್ ಹಾಕೈ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಾಧವ ಗಿತ್ತೆ, ಸಹಾಯಕ ಆಯುಕ್ತೆ ರೂಪಿಂದ್ರ ಕೌರ ಬಸವ ಸಮಿತಿ ಅಧ್ಯಕ್ಷ ವಿನೋದ ಪಾಟೀಲ ಸರಡಗಿ ಅಖಿಲ ಭಾರತ ವೀರ ಶೈವ ಲಿಂಗಾಯಿತ ಸಮಾಜದ ಶರಣಕುಮಾರ ಮೋದಿ, ಜಿಲ್ಲಾ ವೀರಶೈವ ಸಮಾಜ ಅರುಣಕುಮಾರ ಎಸ್. ಪಾಟೀಲ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಎಸ್ ರಡ್ಡಿ, ಉಪಾಧ್ಯಕ್ಷ ಉದಯಕುಮಾರ ಪಾಟೀಲ, ಕಾರ್ಯದರ್ಶಿ ರಮೇಶ ತೆಗ್ಗಿನಮನೆ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಹಾಗೂ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.