ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ಶಾಂತಿನಿಕೇತನ ಪ್ರೌಢಶಾಲೆ ಮೇಲುಗೈ
ವಿಜಯಪುರ,ಮೇ.10:ವಿಜಯಪುರದ ಆದರ್ಶನಗರದಲ್ಲಿ ಇರುವ ಶಾಂತಿನಿಕೇತನ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.
10ನೇ ತರಗತಿಯ ಪರೀಕ್ಷೆಗೆ ಒಟ್ಟು 95 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 91 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅತ್ಯುತ್ತಮ ಶ್ರೇಣಿಯಲ್ಲಿ 54 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರಥಮ ಶ್ರೇಣಿಯಲ್ಲಿ 34 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ 03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕುಮಾರಿ ಗುರುದೇವಿ ಪಾಟೀಲ 613 (ಶೇ.98.08) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆÉ. ಕುಮಾರ ಕಾರ್ತಿಕ ಚವ್ಹಾಣ 604 (ಶೇ.96.64) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ಕುಮಾರಿ ಉನ್ನತಿ ಮೆಹ್ತಾ 603 (ಶೇ.96.48) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆÉ.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಡಾ. ಸುರೇಶ ಬಿರಾದಾರ, ಅಧ್ಯಕ್ಷೆ ಶೀಲಾ ಬಿರಾದಾರ, ಪ್ರಾಚಾರ್ಯ ಶ್ರೀಧರ ಕುರಬೇಟ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.