ಹೊಂಗಿರಣ ಸಭಾಂಗಣದಲ್ಲಿಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.10: ನಗರದ ಸಾಂಸ್ಕೃತಿಕ ಸಮುಚ್ಛಯದ  ಹೊಂಗಿರಣ ಸಭಾಂಗಣದಲ್ಲಿ ಇಂದು  ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ವೇಳೆ ರೆಡ್ಡಿ ಸಮಾಜದ ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ನಸರಾ ಪ್ರತಾಪ್ ರೆಡ್ಡಿ, ಗಣಪಾಲ ಐನಾಥರೆಡ್ಡಿ, ಎನ್.ಬಸವರಾಜ್,
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್,ಮಾಜಿ‌ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ, ಸದಸ್ಯ ಜಾನೆಕುಂಟೆ ನೇಪಾಕ್ಷಪ್ಪ ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಮಹೇಶ್ , ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು
ಭಾಗವಹಿಸಿದ್ದರು.