ಮೇ 11 ರಿಂದ 13ರವರೆಗೆ ಮೂರುದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.10:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಕೊಟ್ನೂರ ಹಾಗೂ ಶೋರಗುಂಬಜ್‍ದಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಮೇ 11 ಹಾಗೂ 12 ರಂದು ಶುದ್ಧೀಕರಣ ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಇದೇ ಮೇ 11 ರಿಂದ 13 ರವರೆಗೆ ಮೂರು ದಿನಗಳ ಕಾಲ ಕಲಬುರಗಿ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.