ಶ್ರೀ ಬಸವೇಶ್ವರ ಮತ್ತು ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಹುಬ್ಬಳ್ಳಿ, ಮೇ.10: ಇಂದು ತಾಲ್ಲೂಕು ಆಡಳಿತ ಸೌಧದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಮತ್ತು ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ್ ಪಾಟೀಲ್, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ್ ಹೊಳೆಪ್ಪಗೋಳ, ಹುಬ್ಬಳ್ಳಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರ ಹೊಸಮನಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಇತರರು ಉಪಸ್ಥಿತರಿದ್ದರು.