ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇಕಡಾ 100% ಫಲಿತಾಂಶ
ಸಂಜೆವಾಣಿ ವಾರ್ತೆ
ನಂಜನಗೂಡು.ಮೇ.10:- 2023 _24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ನಂಜನಗೂಡಿನ ಪ್ರತಿಷ್ಠಿತ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆ ಶೇಕಡ 100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ..ಸದರಿ ಶಾಲೆ ಎರಡನೇ bಚಿಣಛಿh ನಲ್ಲಿಯೇ ಶೇಕಡ 100 ರಷ್ಟು ಫಲಿತಾಂಶ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳ ಪೈಕಿ ಎಂಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.
ಜೊತೆಗೆ 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಏಳು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತರುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಫಲಿತಾಂಶಕ್ಕಾಗಿ ಹಗಲಿರುಳು ಶ್ರಮವಹಿಸಿದ ಶಿಕ್ಷಕ ವೃಂದವನ್ನು ಶಾಲಾ ಆಡಳಿತ ಮಂಡಳಿ ಆತ್ಮೀಯವಾಗಿ ಅಭಿನಂದಿಸುತ್ತಿದೆ.