ವಿಶ್ವಗುರು ಬಸವಣ್ಣ ವಿಶ್ವದ ಸಾಂಸ್ಕøತಿಕ ನಾಯಕರು
ಕಲಬುರಗಿ:ಮೇ.09: ಇಡೀ ಜಗತ್ತಿನಲ್ಲಿಯೇ ಪ್ರಥಮ ಸಂಸತ್ತು ಎಂದು ಕರೆಯಲ್ಪಡುವ ‘ಅನುಭವ ಮಂಟಪ’ವನ್ನು ಸ್ಥಾಪಿಸಿ, ಸರ್ವರಿಗೂ ಸಮಾನ ಅವಕಾಶವನ್ನು ಒದಗಿಸಿಕೊಟ್ಟು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿಶ್ವಕ್ಕೆ ಪರಿಚಯಿಸಿದ ವಿಶ್ವಗುರು ಬಸವಣ್ಣನವರು ಯಾವುದೇ ಒಂದು ಜಾತಿ, ಧರ್ಮ, ಪ್ರದೇಶಕ್ಕೆ ಮಾತ್ರ ಸೀಮಿತವಲ್ಲ. ಅವರು ಕರ್ನಾಟಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಾಂಸ್ಕøತಿಕ ನಾಯಕರಾಗಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಜೆ.ಆರ್.ನಗರದಲ್ಲಿರುವ ‘ಕೊಹಿನೂರ ಸ್ಪೋಕನ್ ಇಂಗ್ಲೀಷ್ ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ 891ನೇ ಬಸವ ಜಯಂತಿ ಪ್ರಯುಕ್ತ ಗುರುವಾರ ಏರ್ಪಡಿಸಲಾಗಿದ್ದ “ವಿಶ್ವಗುರು ಬಸವಣ್ಣ ಕನಾಟಕದ ಸಾಂಸ್ಕøತಿಕ ನಾಯಕ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬಸವಣ್ಣನವರು ಶ್ರೇಷ್ಠ ಸಮಾಜ ಸುಧಾರಕರು, ತತ್ವಜ್ಞಾನಿಗಳು, ಸಮಾಜಶಾಸ್ತ್ರಜ್ಞರು, ರಾಜಕೀಯ ಚಿಂತಕರು, ಅರ್ಥಶಾಸ್ತ್ರಜ್ಞರು, ಕಲ್ಯಾಣ ರಾಜ್ಯದ ರೂವಾರಿಗಳಾಗಿದ್ದಾರೆ. ಕಾಯಕ, ದಾಸೋಹ, ಸಮಾನತೆ ಎಂಬ ತ್ರಿಸೂತ್ರ ವಿಶ್ವಕ್ಕೆ ನೀಡಿದ ಮಹಾಮಾನವತವಾದಿಯಾಗಿದ್ದಾರೆ. ವಿಶ್ವಕ್ಕೆ ಮಾದರಿಯಾದಂತಹ ಕಾರ್ಯವನ್ನು ಮಾಡಿ ವಿಶ್ವಗುರುವಾಗಿದ್ದಾರೆ. ಸಕಲ ಜೀವ ರಾಶಿಗಳಿಗೆ ಲೇಸನ್ನೇ ಬಯಸುವ ಶರಣ ಸಂಸ್ಕøತಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿ ಶಿವಯೋಗೆಪ್ಪಾ ಎಸ್.ಬಿರಾದಾರ, ಝಾಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖಿ, ಮಲ್ಲಿನಾಥ ಮಹಾರಾಜ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮರ ಜಿ.ಬಂಗರಗಿ, ಕೊಹಿನೂರ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯ ನಿರ್ದೇಶಕ ದತ್ತು ಹಡಪದ, ಕಂಪ್ಯೂಟರ ಅಕಾಡೆಮಿಯ ನಿರ್ದೇಶಕ ಇಸ್ಮೈಲ್ ಅತ್ತರ್, ಕಂಪ್ಯೂಟರ ಶಿಕ್ಷಕಿ ವೀಣಾ ಬಿರಾದಾರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.