ಪೆನ್‌ಡ್ರೈವ್ ಸಿಬಿಐ ತನಿಖೆಗೆ ಆಗ್ರಹ
ಬೆಂಗಳೂರು, ಮೇ.೯-ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಹೆಣ್ಣು ಮಕ್ಕಳನ್ನು ಬೀದಿಗೆ ತಂದು ಅವರ ಕುಟುಂಬವನ್ನು ಅವಮಾನಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈ ಪ್ರಕರಣವನ್ನು ಎಸ್‌ಐಟಿ ಯಿಂದ ಸಿಬಿಐಗೆ ವರ್ಗಾಯಿಸಿಬೇಕೆಂದು ಬೋದಿಸತ್ವ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹಿಸಿದೆ.
ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಜಮಾಯಿಸಿದ ಬೋದಿಸತ್ವ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು,ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿದರು.
ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಲ್ಲಿ ವಿಫಲವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಎಸ್‌ಐಟಿಯಲ್ಲಿ ಉತ್ತಮ ಅಧಿಕಾರಿಗಳಿದ್ದರೂ ಅವರಿಗೆ ತನಿಖೆಯಲ್ಲಿ ಮುಕ್ತ ಅವಕಾಶ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.