ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಆನೇಕಲ್, ಮೇ.೯; ಮಂಟಪ ಗೇಟ್ ಬಳಿಯಿರುವ ಶ್ರೀ ಕೃಷ್ಣ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ೨೦೨೪ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿಧ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ವತಿಯಿಂದ ಗೌರವ ಪೂರ್ವಕವಾಗಿ ಅಭಿನಂದನೆ ಸಲ್ಲಿಸಲಾಯಿತು,
ವಿಜ್ಞಾನ ವಿಭಾಗದಲ್ಲಿ ಕೆ.ಮಂಜುಳಾ ೯೦% ಮತ್ತು ಜಿ,ಯೋಗೇಶ್ ೮೬% ಪಸೆಂಟ್ ಇನ್ನು ವಾಣಿಜ್ಯ ವಿಭಾಗದಲ್ಲಿ ಪಾಯಲ್ ಶರ್ಮಾ ೯೧% ಮತ್ತು ಸಂಜನಾ ೮೯%
ಹಾಗೆಯೇ ೪೯% ಪಸೆಂಟ್ ವಿದ್ಯಾರ್ಥಿಗಳು ಅತ್ಯುನ್ನತ ಸ್ಥಾನ ಪಡೆದರೆ, ೩೧% ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ನೂರಕ್ಕೆ ನೂರು ಪಲಿತಾಂಶ ಬಂದಿದೆ.
ಈ ವೇಳೆ ಶ್ರೀ ಕೃಷ್ಣ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀಮತಿ ಯಶೋದ ಹರಿಕುಮಾರ್ ರವರು ಮಾತನಾಡಿ ನಮ್ಮ ಕಾಲೇಜಿನಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಲಾಗಿದೆ ಜೊತೆಗೆ ನುರಿತ ಶಿಕ್ಷಕರಿದ್ದು, ವಿದ್ಯಾರ್ಥಿಗಳ ಪ್ರಗತಿಯೇ ನಮ್ಮ ಮುಖ್ಯ ಗುರಿಯಾಗಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನು ಮಂಟಪ ಸುತ್ತ ಮುತ್ತಲಿನ ಗ್ರಾಮಗಳಲ್ಲಿನ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಕಾಲೇಜಿಗೆ ಸೇರಿಸಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಆಡಳಿತ ಅದಿಕಾರಿ ಜಿ.ಅಮರ್ ನಾರಾಯಣ್. ಕಾಲೇಜಿನ ಪ್ರಾಂಶುಪಾಲರಾದ ವಿ.ಸಂತೋಷ್ ಮತ್ತು ಶಿಕ್ಷಕರ ವೃಂದ, ಮತ್ತು ವಿದ್ಯಾರ್ಥಿಗಳು ಬಾಗವಹಿಸಿದ್ದರು.