ಆಪರೇಷನ್ ಎಲಿಫ್ಯಾಂಟ್ ಸಕ್ಸಸ್: ಬಂಡೀಪುರದಲ್ಲಿ ಆನೆ ಸೆರೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.09- ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ರೈತರಿಗೆ ಉಟಪಳ ಕೊಡುತ್ತಿದ್ದ ಆನೆಯನ್ನು ನಿರಂತರ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಬುಧವಾರ ಬೆಳಗ್ಗೆ ಸೆರೆ ಹಿಡಿದಿದ್ದಾರೆ.
ಗೋಪಾಲಸ್ವಾಮಿ ಬೆಟ್ಟ ವಲಯದ ಹಿರಿಕೆರೆ ಹಿಂಭಾಗದ ಪ್ರದೇಶದಲ್ಲಿ ರಾಂಪುರ ಆನೆ ಶಿಬಿರದ ಪಾರ್ಥಸಾರಥಿ, ಗಣೇಶ ಹಾಗೂ ದುಬಾರೆ ಆನೆ ಶಿಬಿರದ 4 ಆನೆಗಳ ಸಹಾಯದಿಂದ 45 ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆನೆಯನ್ನು ಸೆರೆ ಹಿಡಿಯಲಾಗಿದೆ.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಅಭಯಾರಣ್ಯದ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಹಿರೀಕೆರೆ ಭಾಗದಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆಯವರು ಕಳೆದ ಏ.15 ರಲ್ಲಿ ಕೂಂಬಿಂಗ್ ಆರಂಭಿಸಿದ್ದರು. ಬಳಿಕ ಸೆರೆ ಕಾರ್ಯಾಚರಣೆ ನಿಲ್ಲಿಸಿದ್ದರು. ಅದಾದ ನಂತರ, ಕಳೆದ 10 ದಿನಗಳಿಂದ ಪುಂಡಾನೆ ಸೆರೆಗೆ ಮತ್ತೇ ಕಾರ್ಯಾಚರಣೆ ಆರಂಭಿಸಿ ಕೊನೆಗೂ ಯಶ ಕಂಡಿದ್ದಾರೆ.