ಸಮಾಜ ಸೇವಕ ಆಲೂರ ಅವರಿಗೆ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.9:ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯ ಶ್ರೀ ಪಟ್ಟಿಕಂಥಿ ಹಿರೇಮಠದ ಬಾಲತಪಸ್ವಿ ಶ್ರೀ ಷ.ಬ್ರ ಮಹಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ 75ನೇ ಯಾತ್ರಾ ಮಹೋತ್ಸವ, ತಪೋಷಣ ಶ್ರೀ ಷ ಬ್ರ.ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ 23ನೇ ಸಂಸ್ಮರಣೋತ್ಸವ ಹಾಗೂ ಗುರು ಮಹಾಂತೇಶ್ವರ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರು ಆದ ಸಮಾಜ ಸೇವಕ ಎಸ್.ಎಸ್.ಆಲೂರ ದಂಪತಿಗಳಿಗೆ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಏ.8ರ ಬುಧವಾರದಂದು ಮನಗೂಳಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇವರ ಸೇವೆಯನ್ನು ಪರಿಗಣಿಸಿ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡೋಣೂರು-ಕೊಟ್ಟೂರು ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕೆರೂರ-ಕೊಣ್ಣೂರ ಮಠದ ಶ್ರೀ ಡಾ.ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಅಮರೇಶ್ವರಮಠ ಗುಳೇದಗುಡ್ಡದ ಶ್ರೀ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಡಾ.ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿಯ ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಇಂಗಳೇಶ್ವರ-ವಡವಡಗಿಯ ಶ್ರೀ ಬೃಂಗೀಶ್ವರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಸೋಮನಗೌಡ (ಅಪ್ಪುಗೌಡ) ಪಾಟೀಲ, ಚಂದ್ರಶೇಖರ ಎಸ್.ಪಾಟೀಲ, ಎಸ್.ಜಿ.ಹಾವಣ್ಣವರ, ಎಸ್.ಆಯ್.ರೇವೂರಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.