ಭದ್ರತಾಕೋಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
ಕಲಬುರಗಿ, ಮೇ 8:ಮಂಗಳವಾರ ಜಿಲ್ಲೆಯಲ್ಲಿ ನಡೆದ ಲೋಕಸಭೆ ಚುನಾವಣೆಯ ಮತಯಂತ್ರಗಳನ್ನು ಮತಎಣಿಕೆ ನಡೆಯುವ ಗುಲಬರ್ಗ ವಿಶ್ವವಿದ್ಯಾಲಯದ ಸ್ಟ್ರಾಂಗ್‍ರೂಮ್ ನಲ್ಲಿ ಸಶಸ್ತ್ರಪಡೆಯ ಕಾವಲಿನೊಂದಿಗೆ ಭದ್ರವಾಗಿಡಲಾಗಿದೆ.
ಮಂಗಳವಾರ ನಡೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ ಶೇ.62.27ರಷ್ಟು ಮತದಾನವಾಗಿತ್ತು. ಮತದಾನ ಪ್ರಕ್ರಿಯೆ ಮುಗಿದ ನಂತರ ಮತಯಂತ್ರಗಳನ್ನು ಗುಲಬರ್ಗ ವಿಶ್ವವಿದ್ಯಾಲಯದ ಭದ್ರತಾಕೋಣೆಯಲ್ಲಿ ಸುರಕ್ಷಿತವಾಗಿಡಲಾಗಿದೆ.
ಜೂನ್ 4 ರಂದು ಇಲ್ಲಿ ಮತಗಳ ಎಣಿಕೆ ನಡೆಯಲಿದ್ದು ಅಲ್ಲಿಯವರೆಗೆ ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿರಲಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಆರ್ ಚೇತನ್, ಕಲಬುರಗಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪಂಕರ್ ಸಿನ್ಹಾ ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮೂಲಗೆ ಹಾಗೂ ವಿವಿಧ ಪಕ್ಷಗಳ ಮುಖಂಡರು ಇಲ್ಲಿಗೆ ಭೇಟಿ ನೀಡಿ ವೀಕ್ಷಿಸಿದರು.