ಮುರುಘಾಮಠದಲ್ಲಿ ಸರಳ ಸಾಮೂಹಿಕ ವಿವಾಹ ಮಹೋತ್ಸವ

ಸಂಜೆವಾಣಿ ವಾರ್ತೆ
ಚಿತ್ರದುರ್ಗ, ಡಿ.8: ಐತಿಹಾಸಿಕ ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಹಿಂದಿನ ಪೀಠಾಧಿಪತಿಗಳೆಲ್ಲರೂ ಸಹ ನಿರ್ಮೋಹ, ನಿರಹಂಕಾರ, ನಿಸ್ವಾರ್ಥತೆಯ ಮಹಾಸದ್ಗುಣಗಳನ್ನು ಹೊಂದಿದವರು. ಸರಳತೆ, ಸಮಾನತೆ ಎಂಬ ಮಹಾತತ್ವದ ಮಣಿಹವನ್ನು ಹೊತ್ತು ನಡೆದು ಸಮಾಜ್ಕಕೆ ತಮ್ಮದೇ ಆದರ್ಶದ ಪಥವನ್ನು ಬಿಟ್ಟು ಹೋಗಿದ್ದಾರೆ. ಅಂತಹ ದಾರಿಯನ್ನು ಈಗಲೂ ಸಹ ಬೃಹನ್ಮಠ ಆಧರಿಸಿ, ಅನುಸರಿಸಿ ನಡೆದಿರುವುದ್ಕಕೆ ಈ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವವೇ ಸಾಕ್ಷಿ ಎಂದು ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ನುಡಿದರು.ಬೃಹನ್ಮಠದ ಆವರಣದಲ್ಲಿನ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದ್ದ ೩೪ ನೇ ವರ್ಷದ ಐದನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ, 16 ಜೋಡಿಗಳ ವಿವಾಹಗಳನ್ನು ನೆರವೇರಿಸಿ ಮಾತನಾಡಿದ ಶ್ರೀಗಳು, ಸದಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಶ್ರೀ ಬೃಹನ್ಮಠದ ಸಾಮಾಜಿಕ ಕಾರ್ಯಗಳಲ್ಲಿ ಈ ಸರಳ ಸಾಮೂಹಿಕ ವಿವಾಹವೂ ಒಂದು. ಇದು ಎಷ್ಟೋ ಬಡಜನರ ಪಾಲಿಗೆ ಆಶಾಕಿರಣವಾಗಿದೆ ಎಂದರೆ ತಪ್ಪಲ್ಲ. ಶ್ರೀಮಠದೊಂದಿಗೆ ಸಾರ್ವಜನಿಕರು ಇಂತಹ ಜನಪರ ಕಾರ್ಯಗಳಲ್ಲಿ ಪಾಲ್ಗೊಂಡು ಈ ಪದ್ಧತಿಯನ್ನು ಅನುಸರಿಸುವ ಮೂಲಕ ದುಂದುವೆಚ್ಚö್ಕಕೆ ಕಡಿವಾಣ ಹಾಕುವ ಕ್ರಮವೂ ನಿಮ್ಮಿಂದ ನಡೆದಿರುವುದು ಶ್ಲಾಘನೀಯ ಎಂದರು.