ಎಂಎಲ್‍ಸಿ ಸುನೀಲಗೌಡ ಮತ ಚಲಾವಣೆ
ವಿಜಯಪುರ, ಮೇ.8: ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮಂಗಳವಾರ ನಗರದಲ್ಲಿ ಮತದಾನ ಮಾಡಿದರು.
ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಬಿ ಸ್ಕೂಲ್‍ನಲ್ಲಿರುವ ಮತಗಟ್ಟೆ ಸಂಖ್ಯೆ 46ಕ್ಕೆ ತೆರಳಿ ಅವರು ತಮ್ಮ ಹಕ್ಕು ಚಲಾಯಿಸಿದರು.
ಬಳಿಕ ಮಾತನಾಡಿದ ಅವರು, ಈ ಬಾರಿ ಜಿಲ್ಲೆಯಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಗೆಲುವು ಸಾಧಿಸಿ ಸಂಸತ್ತಿನಲ್ಲಿ ವಿಜಯಪುರ ಜಿಲ್ಲೆಯ ಜನರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.