ಅಸ್ಪೃಶ್ಯತೆ ನಿವಾರಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ

ಸಂಜೆವಾಣಿ ವಾರ್ತೆ
ಬೆಂಗಳೂರು ಮೇ.8; ಅಸ್ಪçಶ್ಯತೆಯನ್ನು ನಿವಾರಿಸಿ ಸಮಾಜದಲ್ಲಿ ಸರ್ವರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಸತ್ಕ್ರಾಂತಿಗೆ ಮುನ್ನುಡಿ ಬರೆದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ನಗರದ ಆನಂದರಾವ್ ವೃತ್ತದಲ್ಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಸಮಾಜದಲ್ಲಿರುವ ಮೇಲು-ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬರಿಗೂ ಭಗವಂತನನ್ನು ಅರ್ಚಿಸಲು ಸಮಾನ ಅವಕಾಶವಿದ್ದು, ಎಲ್ಲ ವರ್ಗದ ಜನರಿಗೆ ಸಂಸ್ಕಾರ ನೀಡುವುದಕ್ಕಾಗಿ 18 ಜಾತಿ ಜನಾಂಗಗಳಿಗೆ ಪ್ರತ್ಯೇಕವಾದ ಮಠಗಳನ್ನು ನಿರ್ಮಿಸುವ ಮೂಲಕ ಯುಗ ಯುಗಗಳ ಹಿಂದೆಯೇ ಧಾರ್ಮಿಕ ಸತ್ಕಾçಂತಿಯನ್ನು ಮಾಡಿದ ಮಹಾಪುರುಷ ಶ್ರೀ ಜಗದ್ಗುರು ರೇಣುಕಾಚಾರ್ಯರು. ನೆರೆಯ ತೆಲಂಗಾಣ ರಾಜ್ಯದ ಕೊಲ್ಲಿಪಾಕಿ ಸ್ವಯಂಭು ಸೋಮೇಶ್ವರ ಶಿವಲಿಂಗದಿAದ ಆವಿರ್ಭವಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರು ಮಾಡಿದ ಸಾಮಾಜಿಕ ಕ್ರಾಂತಿಯ ಕುರುಹುಗಳನ್ನು ಇಂದಿಗೂ ಕಾಣಬಹುದು. ಹಿಂದುಳಿದ ಕಬ್ಬಿಗರ ಕುಲದಲ್ಲಿ ಹುಟ್ಟಿದ ಅಗಸ್ತ್ಯ ಮಹರ್ಷಿಗೆ ಶಿವಾದ್ವೆöÊತ ಸಿದ್ಧಾಂತವನ್ನು ಬೋಧಿಸಿದ ಶ್ರೀ ರೇಣುಕಾಚಾರ್ಯರು ಮಲಯಾಚಲದ ಭದ್ರಾನದಿ ತೀರದಲ್ಲಿ ಶ್ರೀ ರಂಭಾಪುರಿ ಪೀಠವನ್ನು ಸಂಸ್ಥಾಪನೆ ಮಾಡಿ ಮಾನವ ಕುಲಕೋಟಿಗೆ ಧಾರ್ಮಿಕ ಸಂಸ್ಕಾರವನ್ನು ನೀಡುವ ಶಾಶ್ವತ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಅಂದು ರೇಣುಕಾಚಾರ್ಯರು ಬೆಳಗಿದ ಧರ್ಮ ದೀವಿಗೆಯು ನಿರಂತರವಾಗಿ ಇಂದಿಗೂ ಸಮಾಜಕ್ಕೆ ಜ್ಞಾನದ ಬೆಳಕನ್ನು ನೀಡುತ್ತಿದೆ. ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ನೀಡುವ ಸಂಸ್ಕಾರ ಜೀವನ ಪರ್ಯಂತ ಸತ್ಫಲ ನೀಡುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಂಸ್ಕಾರ ಪಡೆಯುತ್ತಿದ್ದಾರೆ. ದೇಶ, ಧರ್ಮದ ಬಗ್ಗೆ ಅಭಿಮಾನವಿಲ್ಲದವನ ಹೃದಯ ಸುಡುಗಾಡು ಎಂಬ ಕವಿ ಕುವೆಂಪು ಅವರ ಮಾತನ್ನು ಯಾರೂ ಮರೆಯಬಾರದು ಎಂದು ಡಾ.ವೀರಸೋಮೇಶ್ವರ ಜಗದ್ಗುರುಗಳು ವಿವರಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯರ ಆದರ್ಶ ಮೌಲ್ಯಗಳ ಬಗ್ಗೆ ಜನರಿಗೆ ಹೆಚ್ಚು ಪರಿಚಯವಿಲ್ಲದಿರುವುದರಿಂದ ವ್ಯಾಪಕವಾಗಿ ಪ್ರಚಾರ ಮಾಡುವ ಅಗತ್ಯವಿದ್ದು, ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಯಲ್ಲಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು. ಜೊತೆಗೆ ವಿದ್ಯಾಸಂಸ್ಥೆಯ ಪ್ರಧಾನ ಶಾಖೆಯ ನೈರುತ್ಯ ಭಾಗದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾಮಯ ಮಂದಿರವನ್ನು ಸ್ಥಾಪಿಸುವ ಉದ್ದೇಶವಿದೆ ಎಂದರು. ಕುವೆಂಪು ವಿವಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಅಧ್ಯಯನ ಕೇಂದ್ರಕ್ಕೆ ಈಗಾಗಲೇ ರಾಜ್ಯಪಾಲರಿಂದ ಅನುಮೋದನೆ ದೊರೆತಿದ್ದು, ಸರ್ಕಾರ ಇನ್ನೂ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ. ಲೋಕಸಭೆ ಚುನಾವಣೆಯ ನಂತರ ಕಾರ್ಯಾರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ಸಿದ್ಧಾಂತ ಶಿಖಾಮಣಿ ಗ್ರಂಥ ಬಿಡುಗಡೆ: ನಾಡು ಕಂಡ ಶ್ರೇಷ್ಠ ವಿದ್ವಾಂಸ ಡಾ.ಜಚನಿಯವರು ಬರೆದಿರುವ ಸಿದ್ಧಾಂತ ಶಿಖಾಮಣಿ ಪಾರಾಯಣ ಗ್ರಂಥದ ಕನ್ನಡಾನುವಾದದ ಕೃತಿಯನ್ನು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಬಿಡುಗಡೆಗೊಳಿಸಿದರು. ಮರುಮುದ್ರಣವಾದ ಕೃತಿಯನ್ನು ಹಿರಿಯ ವಿದ್ವಾಂಸ ಡಾ.ಸಿ.ಶಿವಕುಮಾರಸ್ವಾಮಿ ಸಂಪಾದಿಸಿದ್ದು, 1380 ಶ್ಲೋಕಗಳಿಂದ ಕೂಡಿದೆ. ಜಾತಿ, ಮತ, ಪಂಥವನ್ನು ಮೀರಿದ ಎಲ್ಲ ಜನಾಂಗದವರಿಗೆ ಬೇಕಾದ ತತ್ವಾದರ್ಶಗಳ ಸಾರ ಸಿದ್ಧಾಂತ ಶಿಖಾಮಣಿ ಗ್ರಂಥದಲ್ಲಿದೆ. ದಶಧರ್ಮ ಸೂತ್ರದ ಆಧಾರದಲ್ಲಿ ಶಿವಾದ್ವೆöÊತ ಸಿದ್ಧಾಂತವನ್ನು ಜಗದ್ಗುರು ರೇಣುಕರು ಅಗಸ್ತö್ಯ ಮಹಾಮುನಿಗೆ ಬೋಧಿಸಿದ್ದು ರೇಣುಕ ಗೀತೆ, ರೇಣುಕಾಗಸ್ತö್ಯ ಸಂವಾದ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ.