ತಾಲ್ಲೂಕಿನಲ್ಲಿ ಶೇ.66.90 ಮತದಾನ
ಔರಾದ :ಮೇ.8: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ತಾಲ್ಲೂಕಿನಲ್ಲಿ ಶೇ. 66.90% ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳಾದ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ 117100 ಪುರುಷರು, 109301 ಮಹಿಳೆಯರು ಒಟ್ಟು 226401 ಮತದಾರರಿದ್ದು ಅದರಲ್ಲಿ 78445 ಪುರುಷರು ಹಾಗೂ 73018 ಮಹಿಳೆಯರು ಸೇರಿ ಒಟ್ಟು 151463 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ತಿಳಿಸಿದರು.