ಗುಂಡು ಎಸೆತದಲ್ಲಿ ಪ್ರಥಮ: ರಾಜ್ಯಮಟ್ಟಕ್ಕೆ ಆಯ್ಕೆ
ವಾಡಿ:ಸೆ.22: ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದ ಪಟ್ಟಣದ ಮಹಾತ್ಮಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಹಣಮಂತ ತಂದೆ ನಾಗೇಂದ್ರ 9.90 ಮೀ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಸಾಧನೆಗೆ ಶಾಲೆಯ ಕಾರ್ಯದರ್ಶಿ ಶೇಕ್ ಅನ್ವರ್ ಖಾನ್ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.