ಕನ್ನಡ ನೆಲ, ಜಲ, ಭಾಷೆ ಉಳಿಸಲು ಶ್ರಮಿಸಿ
ಗೌರಿಬಿದನೂರು, ಮೇ ೮: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಗೀತ, ಸಂಸ್ಕೃತಿಯ ಸಂವರ್ಧನೆ ಹಾಗೂ ರಕ್ಷಣೆಯ ಮಹದಾಶಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ೧೯೧೫ ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಲಾಗಿದೆ ಎಂದು ಎಇಎಸ್ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಯ್ಯ ತಿಳಿಸಿದರು.
ನಗರದ ಎಇಎಸ್ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಆಯೋಜಿಸಲಾಗಿದ್ದ ೧೧೦ ನೇ ಸಂಸ್ಶಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರು ಹಾಗೂ ಸರ್.ಎಂ.ವಿಶ್ವೇಶ್ವರಯ್ಯನವರ ಪರಿಶ್ರಮದಿಂದ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ್ದಾರೆ. ಇದರ ಪರಿಣಾಮವಾಗಿ ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿರುವ ಅನೇಕ ಮಂದಿಯಿಂದ ಕನ್ನಡ ಬೆಳವಣೆಗೆಗೆ ಇಂದು ಸಹಕಾರಿಯಾಗಿದೆ ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಮದ್ದಿಲೇಟಿ ಮಾತನಾಡಿ, ತಾಲ್ಲೂಕಿನಲ್ಲಿ ತೆಲುಗು ಭಾಷೆಯ ಪ್ರಭಾವ ಹೆಚ್ಚಾಗಿದ್ದರು ಕನ್ನಡದ ಮೇಲಿನ ಪ್ರೀತಿಗೆ ಕಡಿಮೆಯಿಲ್ಲ. ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಕಾರ್ಯಕ್ರಮಗಳು ಆಯೋಜನೆ ಮಾಡುವ ಮೂಲಕ ಇತರೆ ಭಾಷಿಕರನ್ನು ಕನ್ನಡಿಗರನ್ನಾಗಿ ಹಾಗೂ ಕನ್ನಡ ಭಾಷೆ ಮಾತನಾಡುವಂತ ವಾತಾವರಣ ಕಲ್ಪಿಸಲಾಗುತ್ತಿದೆ ಎಂದರು.
ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ಶ್ರೀನಾಥರೆಡ್ಡಿ, ಪುಲಗೂರು ನಂಜುಂಡಪ್ಪ, ನಂಜಪ್ಪ, ಈಶ್ವರ ರೆಡ್ಡಿ, ಆದಿನಾರಾಯಣಪ್ಪ, ಲಕ್ಷ್ಮೀನಾರಾಯಣಪ್ಪ, ನರಸಿಂಹಯ್ಯ ಸೇರಿದಂತೆ ಇತರರು ಇದ್ದರು.