ಪ್ರಜಾಪ್ರಭುತ್ವದ ಹಬ್ಬದಲ್ಲಿ ಮೊದಲ ಬಾರಿ ಮತದಾನ ಮಾಡಿದ ಹೆಮ್ಮೆ ನನ್ನದು : ಅರ್ಶಿಯಾ ಚಿಂಚಲಿ
ಅಥಣಿ :ಮೇ.8: ಭಾರತದ ಸಂವಿಧಾನ ನನಗೆ ನೀಡಿರುವ ಮತದಾನದ ಹಕ್ಕನ್ನು ನಾನಿಂದು ಮೊದಲನೆಯ ಬಾರಿ ಚಲಾಯಿಸಿದ್ದೇನೆ. ಈ ಕುರಿತು ನನಗೆ ಸಂಪೂರ್ಣ ಆತ್ಮತೃಪ್ತಿ ಇದೆ ಎಂದು ಮೊದಲ ಬಾರಿಗೆ ಮತದಾನ ಮಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಅರ್ಶಿಯಾ ಚಿಂಚಲಿ ತಿಳಿಸಿದರು.
ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಥಣಿ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ – 66 ರಲ್ಲಿ ಮತ ಚಲಾಯಿಸಿ ಮಾತನಾಡಿದರು.
ನಾನು ನೀಡಿದ ಒಂದು ಮತ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು, ಇಲ್ಲಿನ ನೆಲ, ಜಲ ಹಾಗೂ ಸಂಸ್ಕøತಿಯ ರಕ್ಷಣೆ ಮಾಡಲಿದೆ. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಭಾಗವಹಿಸಿ ಮೊದಲ ಬಾರಿಗೆ ಮತದಾನ ಮಾಡಿದ್ದು, ನನಗೆ ಬಹಳ ಸಂತೋಷವಾಗಿದೆ. ಜೊತೆಗೆ ಹೆಮ್ಮೆ ಎನಿಸುತ್ತಿದೆ. ಅಲ್ಲದೇ ಮತದಾನ ನನ್ನ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿದೆ.