ಖರ್ಗೆ, ಜಾಧವ್, ದೊಡ್ಡಮನಿ ಸೇರಿ ಗಣ್ಯರಿಂದ ಮತದಾನ
ಕಲಬುರಗಿ,ಮೇ.7-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕಿ ಕನೀಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ, ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಮತ್ತಿತರ ಗಣ್ಯರು ಮತದಾನ ಮಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಗರದ ಬಸವನಗರ ಮತಗಟ್ಟೆಯಲ್ಲಿ ಪತ್ನಿ ರಾಧಾಬಾಯಿ ಖರ್ಗೆ ಸಮೇತರಾಗಿ ಮತದಾನ ಮಾಡಿದರೆ, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಅವರ ಧರ್ಮಪತ್ನಿ ಶೃತಿ ಖರ್ಗೆ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಚಿತ್ತಾಪುರ ವಿಧಾನಸಭಾ ಮತಕ್ಷೇತ್ರದ ಗುಂಡಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.
ಶಾಸಕಿ ಕನೀಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ ನಗರದ ಮತಗಟ್ಟೆಗಳಲ್ಲಿ ಮತದಾನ ಮಾಡಿದರು. ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು ನಗರದ ಮತಗಟ್ಟೆ ಸಂಖ್ಯೆ 94ರಲ್ಲಿ ಮತದಾನ ಮಾಡಿದರು.