ಮತಗಟ್ಟೆ ಕೇಂದ್ರಗಳಿಗೆ ಸಹಾಯಕ ಚುನಾವಣಾಧಿಕಾರಿ ಭೇಟಿ
ಸೇಡಂ, ಮೇ 07: ತಾಲೂಕಿನ ಊಡಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 137 ರ ಮತಗಟ್ಟೆ ಸಂಖ್ಯೆ ಕೇಂದ್ರಕ್ಕೆ ಸಹಾಯಕ ಚುನಾವಣಾಧಿಕಾರಿ ಆಶಪ್ಪ ಪೂಜಾರಿ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು ಯಾವುದೇ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.