ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್ ನಿಧನ
ಕಲಬುರಗಿ,ಮೇ.6- ಸೇಡಂ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ ಜಾವ 3 ಗಂಟೆಗೆ ಪಟ್ಟಣದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಎರಡು ದಶಕಗಳಿಂದ ಕಾಂಗ್ರೆಸ್ ಜೊತೆಗೆ ನಿಕಟ ಬಾಂಧವ್ಯ ಹೊಂದಿದ್ದರು.ಮೇ 6 ರಂದು ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಾಗರೆಡ್ಡಿ ಪಾಟೀಲ 1983ರಿಂದ 1985ರ ನಡುವೆ ಎರಡೂವರೆ ವರ್ಷಗಳ ಕಾಲ ಶಾಸಕರಾಗಿದ್ದರು.
ನಾಗರೆಡ್ಡಿ ಅವರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಗೌರವ ಅಧ್ಯಕ್ಷರೂ ಆಗಿದ್ದರು.
ನಾಗರೆಡ್ಡಿ ಅವರು ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ ಅವರ ತಂದೆ. ಇಂದು ಮಧ್ಯಾಹ್ನ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎಂದೇ ಹೆಸರುವಾಸಿಯಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ
ಸೇಡಂ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ನಾಗರೆಡ್ಡಿ ಪಾಟೀಲರು ಮತ್ತು ತಾವು ಮೊದಲ ಬಾರಿ 1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಸ್ಮರಿಸಿಕೊಂಡರು.
ಸೇಡಂ ತಾಲೂಕಿನ ಮಾಜಿ ಶಾಸಕರು ಹಾಗೂ ಶಿಕ್ಷಣ ಪ್ರೇಮಿಗಳಾದ ಡಾ.ನಾಗರೆಡ್ಡಿ ಪಾಟೀಲ ಅವರು ದೈವಾಧೀನರಾಗಿದ್ದಾರೆ. ಗಂಭೀರ ಸ್ವಭಾವದ ಗೌಡರು, ಮಗು ಮನಸ್ಸಿನ ಗುಣದವರು, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಡಾ.ನಾಗರೆಡ್ಡಿ ಪಾಟೀಲರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಇಡೀ ಕುಟುಂಬಕ್ಕೆ ಗೌಡರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ.
ಸೌಮ್ಯ ಸ್ವಭಾವದ ನಾಗರಡ್ಡಿ ಪಾಟೀಲರು ಸಮಾಜದ ಕಳಕಳಿ ಉಳ್ಳವರು ಶಿಕ್ಷಣ ಪ್ರೇಮಿಗಳು ತಾಲೂಕಿನ ಮಾಜಿ ಶಾಸಕರು ಕೃಷಿ ಕಾಯಕವಂತರು ಕೃಷಿ ಇಲಾಖೆಯಲ್ಲಿ ಜಿಲ್ಲೆಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದಂತ ಪುಣ್ಯಾತ್ಮರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುವೆ.
ಸೋಮನಾಥ ರೆಡ್ಡಿ ಕೋಡ್ಲಾ
ನನ್ನ ಹಿತೈಷಿಗಳು,ಪಿತೃಸ್ವರೂಪಿಗಳು ಆಗಿದ್ದ ಗೌರವಾನ್ವಿತ ಡಾ.ನಾಗರೆಡ್ಡಿ ಪಾಟೀಲ ಸರ್ ಅವರ ನಿಧನ ವಾರ್ತೆ ನನಗಂತೂ ತುಂಬಾ ದು:ಖವನ್ನುಂಟು ಮಾಡಿದೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಶೋಭಾ ದೇವಿ
ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ನಿಧನಕ್ಕೆ ಸೇಡಂ ಶೋಕ
ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಡಾ.ನಾಗರೆಡ್ಡಿ ಪಾಟೀಲ ಅವರು ಶಾಸಕರಾಗಿ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂಸ್ಥಾಪನಾ ಸದಸ್ಯರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಸಂಸ್ಥೆಯ ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಸೇಡಂ ಪ್ರಾರ್ಥಿಸಿದ್ದಾರೆ.