ಮತದಾನಕ್ಕೆ ಸಕಲ ಸಿದ್ಧತೆ
ಹುಬ್ಬಳ್ಳಿ, ಮೇ 6: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ ಬೆಳಿಗ್ಗೆ ಚುನಾವಣಾ ಸಿಬ್ಬಂದಿ ಆಗಮಿಸಿ ತಮ್ಮ ಇವಿಎಂ ಯಂತ್ರ ಪರಿಶೀಲನೆ ಮಾಡಿಕೊಂಡರು. ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿಗಳ ನಿಯೋಜನೆ ಮಾಡಲಾಯಿತು.
ಪ್ರತಿ ಬೂತ್‍ಗೆ ಸಿಬ್ಬಂದಿ ಹಾಗೂ ಪೆÇಲೀಸ್ ಸಿಬ್ಬಂದಿ ನಿಯೋಜನೆ ಮಾಡುವ ದೃಶ್ಯಗಳು ಕಂಡು ಬಂದವು.
ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಶ್ರೀ ಶಂಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕುಂದಗೋಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಪಿಯು ಕಾಲೇಜು, ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ ನಗರದ ಬಾಸೆಲ್ ಮಿಷನ್ ಇಂಗ್ಲೀಷ್ ಮಾಧ್ಯಮ ಪ್ರೌಡ ಶಾಲೆ, ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿದ್ಯಾನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಲ್ಯಾಮಿಂಗ್ಟನ್ ಬಾಲಕ ಮತ್ತು ಬಾಲಕಿಯರ ಶಾಲೆ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಆರ್.ಎಲ್.ಎಸ್. ಸಂಯುಕ್ತ ಪೂರ್ವ ವಿಶ್ವವಿದ್ಯಾಲಯ ಕಾಲೇಜು, ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಹಾಗೂ ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಒಳಪಡುವ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ ನಗರದ ಜೆಎಂಜೆ ಶಾಲೆಯಲ್ಲಿ ಮಸ್ಟರಿಂಗ್ ಕೇಂದ್ರವನ್ನು ತೆರೆಯಲಾಗಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ.