ಪ್ರಜ್ವಲ್ ರೇವಣ್ಣ ಪ್ರತಿಕೃತಿ ದಹಿಸಿದ ಕಾಂಗ್ರೆಸ್
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.06:  ನಗರದ ಗಡಿಗಿ ಚೆನ್ನಪ್ಪ  ವೃತ್ತದಲ್ಲಿ ನಿನ್ನೆ ಸಂಜೆ ರಾಜ್ಯದ ಮಹಿಳೆಯರನ್ನು ಅವಮಾನಿಸಿ, ಮುಗ್ಧ ಮಹಿಳೆಯರನ್ನು ಬೆತ್ತಲುಗೊಳಿಸಿ ಅತ್ಯಾಚಾರ ಎಸಗಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಯುವ  ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಯುವ ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ನೇತೃತ್ವದಲ್ಲಿ ನಡೆದ  ಪ್ರತಿಭಟನೆಯಲ್ಲಿ ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣ  ಅವರ ಪ್ರತಿಕೃತಿ ದಹನ‌ಮಾಡಿ ಆಕ್ರೋಶ ವ್ಯಕ್ತಪಡಿಸಲಾಯ್ತು.