ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ನೋಂದಣಿ ಮಾಡಿಕೊಳ್ಳಲು ಡಾ. ಈ.ಸಿ.ನಿಂಗರಾಜ್‍ಗೌಡ ಮನವಿ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.06- ಮುಂದಿನ ತಿಂಗಳು ಜೂನ್ 03 ರಂದು ನಡೆಯುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಚುನಾವಣಾ ಆಯೋಗದಿಂದ ಹೆಸರನ್ನು ನೋಂದಾಯಿಸಲು ಇಂದು ಕೊನೆಯ ದಿನಾಂಕವಾಗಿದ್ದು, ನೋಂದಣಿ ಮಾಡಿಕೊಳ್ಳಬೇಕೆಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ|| ಈ.ಸಿ. ನಿಂಗರಾಜ್‍ಗೌಡ ಮನವಿ ಮಾಡಿದ್ದಾರೆ.
ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ ಪ್ರೌಢಶಾಲಾ ಶಿಕ್ಷಕರು, ಪಿಯುಸಿ ಶಿಕ್ಷಕರು, ಪದವಿ ಕಾಲೇಜುಗಳ ಉಪನ್ಯಾಸಕರು, ಐಟಿಐ ಕಾಲೇಜುಗಳ ಉಪನ್ಯಾಸಕರು, ಡಿಪೆÇ್ಲಮಾ, ಇಂಜಿನಿಯರಿಂಗ್ ಕಾಲೇಜುಗಳ ಅಧ್ಯಾಪಕರುಗಳು ಹಾಗೂ ಸ್ನಾತಕೋತ್ತರ ಕೇಂದ್ರದ ಅಧ್ಯಾಪಕರು, ವೈದ್ಯಕೀಯ ಕಾಲೇಜಿನ ಅಧ್ಯಾಪಕರು, ಆಯುರ್ವೇದ ಕಾಲೇಜಿನ ಅಧ್ಯಾಪಕರು, ಫಾರ್ಮಸಿ ಕಾಲೇಜಿನ ಅಧ್ಯಾಪಕರು, ಪಾಲಿಟೆಕ್ನಿಕ್ ಕಾಲೇಜುಗಳ ಉಪನ್ಯಾಸಕರು ಮತ್ತು ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರುಗಳು, ಎಲ್ಲಾ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸಹಹೊಸದಾಗಿಯೇ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ಡಾ|| ಈ.ಸಿ. ನಿಂಗರಾಜ್‍ಗೌಡ ಮನವಿ ಮಾಡಿದ್ದಾರೆ.
ಕಳೆದ ಮೂರು ದಶಕಗಳಿಂದ ಮೈಸೂರು ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬೆಳವಣಿಗೆಗಾಗಿ ಹಲವಾರು ಹೋರಾಟಗಳನ್ನು ಮಾಡುತ್ತಾ, ಸಂಬಂಧ ಪಟ್ಟವರಿಗೆ ಸಲಹೆಗಳನ್ನು ನೀಡುತ್ತಾ, ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿಯ ಸದಸ್ಯನಾಗಿ, ಹಣಕಾಸು ಸಮಿತಿಯ ಸದಸ್ಯನಾಗಿ, ಸಿಂಡಿಕೇಟ್ ಸದಸ್ಯನಾಗಿ ಕಾರ್ಯ ನಿರ್ವಹಿಸಿದ್ದೇನೆ. 1994 ರಿಂದಲೂ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕವನ್ನು ಮಾಡುತ್ತಾ ಎಲ್ಲಾ ಶಿಕ್ಷಕರ, ಉದ್ಯೋಗಿಗಳು ಮತ್ತು ಪದವಿಧರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ ಎಂದÀು ಅಭಿಪ್ರಾಯ ಪಟ್ಟಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಸ್ಪರ್ಧಿಸಲು ಕಳೆದ 2 ವರ್ಷಗಳಿಂದ ತಯಾರಿಯನ್ನು ನಡೆಸಿದ್ದು, ಈಗಾಗಲೇ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ ಬಹುತೇಕ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ್ದೇನೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ, ಕರ್ನಾಟಕದ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಸಲು ಹಾಗೂ ಶಿಕ್ಷಕರ, ಪದವಿಧರರ, ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ವರಿಷ್ಠರಲ್ಲಿ ಮನವಿಯನ್ನು ಈಗಾಗಲೇ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಆದುದರಿಂದ ಎಲ್ಲಾ ಅರ್ಹ ಮತದಾರರು ಈ ಸಲವು ಹೊಸದಾಗಿಯೇ ತಮ್ಮ ಹೆಸರನ್ನು, ತಮ್ಮ ವ್ಯಾಪ್ತಿಗೆ ಬರುವ ತಾಲ್ಲೂಕು ಕಚೇರಿಗಳಲ್ಲಿ ಇಂದು ಸಂಜೆ 5ಗಂಟೆಯೊಳಗೆÉ ತಲುಪಿಸಿ ಮತದಾರರಾಗಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ನನ್ನ ಗೆಲುವಿಗೆ ಸಹಕರಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಂಡಿದ್ದಾರೆ.