ಹರಪನಹಳ್ಳಿ, ಹೊನ್ನಾಳಿ, ಮಲೆಬೆನ್ನೂರಿನಲ್ಲಿ ರೋಡ್ ಶೋ ; ಲಕ್ಷಾಂತರ ಜನ ಭಾಗಿ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.4 : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಗುರುವಾರ ಮೂರು ತಾಲೂಕುಗಳಲ್ಲಿ ಶಕ್ತಿ ಪ್ರದರ್ಶಿಸಿದರು. ಹರಪನಹಳ್ಳಿ, ಹೊನ್ನಾಳಿ, ಮಲೆಬೆನ್ನೂರು ಪಟ್ಟಣದಲ್ಲಿ ಸಹಸ್ತ್ರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಮುಖಂಡರ ಸಮ್ಮುಖದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿದರು.ಹರಪನಹಳ್ಳಿ ಪಟ್ಟಣದಲ್ಲಿ  ಆರಂಭವಾದ ಬೃಹತ್ ರೋಡ್ ಶೋ ಪ್ರಮುಖ ಬೀದಿಗಳಲ್ಲಿ ಸಂಚರಿಸಿರು. ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಸಂಸದೆ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಜಿ.ಕರುಣಾಕರರೆಡ್ಡಿ ಸಾಥ್ ನೀಡಿದರು. ಮೆರವಣಿಗೆ ಉದ್ದಕ್ಕೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿ ಮೆರವಣಿಗೆಗೆ ಮೆರುಗು ತಂದರು.ಹರಪನಹಳ್ಳಿ ಪಟ್ಟಣದ ಸೇರಿದಂತೆ ಗ್ರಾಮೀಣ ಭಾಗದ ಸಾವಿರಾರು ಬಿಜೆಪಿ ಕಾರ್ಯಕರ್ತರು, ಸಿದ್ದೇಶ್ವರ್, ಮೋದಿ ಜೀ, ಕರುಣಾಕರರೆಡ್ಡಿ ಅಭಿಮಾನಿಗಳು ಆಗಮಿಸಿ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಬೆಂಬಲ ಸೂಚಿಸಿದರು.