ಮೇ 6 ಹಾಗೂ 7 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ
ಕಲಬುರಗಿ:ಮೇ.5: 05-ಗುಲಬರ್ಗಾ (ಪ.ಜಾ.) ಲೋಕಸಭಾ ಸಾರ್ವತ್ರಿಕ ಚುನಾವಾಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮಂಗಳವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ/ಸಿಬ್ಬಂದಿಗಳನ್ನು ಕರೆದೊಯ್ಯಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1 ರಿಂದ ಒಟ್ಟು 127 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಇದರ ಪ್ರಯುಕ್ತ ಇದೇ ಮೇ 6 ಹಾಗೂ ಮೇ 7 ರಂದು ಎರಡು ದಿನಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಮೇಲ್ಕಂಡ ದಿನದಂದು ಕಲಬುರಗಿ, ಕಮಲಾಪೂರ, ಸೇಡಂ, ಮುಧೋಳ, ಚಿತ್ತಾಪುರ, ಕಾಳಗಿ, ಚಿಂಚೋಳಿ, ಶಹಾಬಾದ ಹಾಗೂ ಕಲಬುರಗಿ ನಗರ ಸಾರಿಗೆ (ಸುಪರ್ ಮಾರ್ಕೇಟ್) ಬಸ್ ನಿಲ್ದಾಣಗಳಿಂದ ವಿವಿಧಡೆ ತೆರಳುವ ದೈನಂದಿನ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕ ಪ್ರಯಾಣಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.