ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ: ಮೇ 7 ರಂದುಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕಲಬುರಗಿ:ಮೇ.5:ಲೋಕಸಭಾ ಚುನಾವಣೆಯ ಮತದಾನ ಇದೇ ಮೇ 7 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿನ ನೌಕರರು ಹಾಗೂ ಸಿಬ್ಬಂದಿಗಳು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳು, ವಿವಿಧ ಸಂಘ-ಸಂಸ್ಥೆಗಳಿಗೆ, ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಮಹಾನಗರ ಪಾಲಿಕೆಯ ಎಲ್ಲಾ ಸ್ಥಳೀಯ ಹಾಗೂ ನಗರ ಸಂಸ್ಥೆಗಳು, ರಾಷ್ಟ್ರೀಕೃತ ಬ್ಯಾಂಕ್‍ಗಳು, ಇತರೆ ಬ್ಯಾಂಕ್‍ಗಳು ಮುಂತಾದ ಕಚೇರಿಗಳಿಗೆ ರಾಜ್ಯ ಸರ್ಕಾರವು ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135ಬಿ ರಡಿ ವೇತನ ಸಹಿತ ರಜೆ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಹಾಗೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು (Iಟಿಜusಣಡಿiಚಿಟ Uಟಿಜeಡಿಣಚಿಞiಟಿg) ಮತ್ತು ಇತರೆ ಸಾರ್ವಜನಿಕ ಸಂಸ್ಥೆ (ಇsಣಚಿbಟishmeಟಿಣ) ಗಳಲ್ಲಿ ಖಾಯಂ ಮತ್ತು ದಿನಗೂಲಿ (ಅಚಿsuಚಿಟ ತಿoಡಿಞ) ಮೇಲೆ ಕಾರ್ಯನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಮೇಲ್ಕಂಡ ದಿನದಂದು ವೇತನ ಸಹಿತ ರಜೆ ನೀಡಲು ಸಂಬಂಧಪಟ್ಟ ಪ್ರಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡತಕ್ಕದ್ದು. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಜೂನ್ 4ಕ್ಕೆ ಗುಲಬರ್ಗಾ ವಿ.ವಿಗೆ ರಜೆ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆಯುವ ಪ್ರಯುಕ್ತ ವಿಶ್ವವಿದ್ಯಾಲಯಕ್ಕೆ ಸೀಮಿತಗೊಳಿಸಿ 2024ರ ಜೂನ್ 4 ರಂದು ರಜೆ ಘೋಷಿಸಲಾಗಿದೆ.