ದೇವಾಂಗ ಸಮಾಜದೊಂದಿಗೆ ನಾವು ಇದ್ದೇವೆ:ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.5; ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ ಅವರು ದೇವಾಂಗ ಸಮಾಜದ ಶ್ರೀ ಗಾಯತ್ರಿ ಪೀಠ, ಹೇಮಕೂಟ, ಹಂಪಿಯ ಜಗದ್ಗುರು ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮಿಜಿ ಅವರ ಆಶೀರ್ವಾದ ಪಡೆದರು. ದೇವಾಂಗ ಸಮಾಜದವರು ಹಿಂದಿನಿAದಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು ಈ ಬಾರಿಯು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮತವನ್ನು ನೀಡಿ ಗೆಲ್ಲಿಸಬೇಕು ಎಂದರು. ಸಮಾಜದ ಬಾಂಧವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮತವನ್ನು ಹಾಕಿ ಸಮಾಜದ ಇನ್ನಷ್ಟು ಅಭಿವೃದ್ಧಿ ಸಹಕರಿಸಿ ಎಂದರು. ಈ ವೇಳೆ ಸಮಾಜದ ಮುಖಂಡರಾದ ರಮೇಶ್ ಅವರು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂಧರ್ಬದಲ್ಲಿ ಸಂದರ್ಭದಲ್ಲಿ ಸಮಾಜದ ಬಾಂಧವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಭಕ್ತರು, ಸ್ಥಳೀಯ ಮುಖಂಡರುಗಳು ಇದ್ದರು.