ಹೊನ್ನಾಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಿ. ಬಿ. ವಿನಯ್ ಕುಮಾರ್ ಗೆ ಭಾರೀ ಬೆಂಬಲ
ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೪;ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಹೊನ್ನಾಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಪ್ರತಿ ಗ್ರಾಮಗಳಲ್ಲಿಯೂ ನೂರಾರು ಸಂಖ್ಕೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದರು.ವಿನಯ್ ಕುಮಾರ್ ಅವರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹೂವಿನ ಹಾರ ಹಾಕಿ ಬರಮಾಡಿಕೊಂಡರು. ವಿನಯ್ ಕುಮಾರ್ ಪರ ಜೈಕಾರಗಳು ಮುಗಿಲು ಮುಟ್ಟಿದವು. ಆರತಿ ಬೆಳಗಿ ಮಹಿಳೆಯರು ಸ್ವಾಗತ ಕೋರಿದರು.ಹೊನ್ನಾಳಿ – ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮಕ್ಕೆ ವಿನಯ್ ಕುಮಾರ್ ಬರುತ್ತಿದ್ದಂತೆ ಗ್ರಾಮದ ನೂರಾರು ಯುವಕರು ಬಿಸಿಲಿನ ಝಳದ ನಡುವೆಯೂ ರೋಡ್ ಶೋನಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಗ್ರಾಮದಲ್ಲಿನ ಜನರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲಾ ವರ್ಗದವರೂ ವಿನಯ್ ಕುಮಾರ್ ಅವರ ಸ್ವಾಭಿಮಾನದ ಹೋರಾಟಕ್ಕೆ ಬೆಂಬಲ ಇದೆ ಎಂದು ಹೇಳುವ ಮೂಲಕ ಬೆಂಬಲಿಸಿದರು. ಮಾಜಿ ಸೈನಿಕರು ಬಹಿರಂಗವಾಗಿಯೇ ಬೆಂಬಲ ಸೂಚಿಸಿದರು.