ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಪ್ರಭಾ‌ಮಲ್ಲಿಕಾರ್ಜುನ್ ಗೆ ಬೆಂಬಲ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೬: ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ, ಡಾ. ಶಿವರಾಜ್ ಕುಮಾರ್, ಅಭಿಮಾನಿಗಳ ಸಂಘ ಹಾಗೂ ರಾಜರತ್ನಂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ, ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾ ಅವರು ಕ್ಷೇತ್ರದ ಅಭಿವೃದ್ಧಿಗೆ ಪಣ ತೊಟ್ಟಿದ್ದು, ವಿದ್ಯಾವಂತರು, ಸೇವಾ ಕಾಳಜಿ ಹೊಂದಿರುವ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮತ ನೀಡಿದರೆ, ಸಂಸತ್ತಿನಲ್ಲಿ ಕ್ಷೇತ್ರದ ಅಭಿವೃದ್ಧಿ ಪರ ದನಿ ಎತ್ತಲಿದ್ದಾರೆ ಎಂಬ ಆಶಯ ನಮ್ಮದು ಎಂದರು.ಸುದ್ದಿಗೋಷ್ಠಿಯಲ್ಲಿ, ಒಕ್ಕೂಟದ ಶಾಮನೂರು ಸುರೇಶ್,ರಾಜಣ್ಣ, ನಿಂಗರಾಜು,‌ದಾದಾಪೀರ್ ಉಪಸ್ಥಿತರಿದ್ದರು.