ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಭಾ ಮಲ್ಲಿಕಾರ್ಜುನ್‌ ಗೆಲ್ಲಿಸಲು ಮನವಿ
ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೬; ಜಿಲ್ಲೆಯ ಅಭಿವೃದ್ಧಿಯಲ್ಲಿ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್   ಪಾತ್ರ ಬಹುಮುಖ್ಯವಾಗಿದೆ. ಕಳೆದ ಮೂರು ದಶಕಗಳಲ್ಲಿ ಜಿಲ್ಲೆಯನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ್ದಾರೆ ಆದ್ದರಿಂದ ಕ್ಷೇತ್ರದ ಜನತೆ ಕಾಂಗ್ರೆಸ್ ‌ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಗೆಲ್ಲಿಸಬೇಕು ಎಂದು‌ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಮನವಿ‌ಮಾಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಜಿಲ್ಲೆಯ ಬಡಜನರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ದಾವಣಗೆರೆ ನಗರವೊಂದರಲ್ಲೇ 16 ಸಾವಿರ ಆರ್ ಸಿ ಸಿ ಮನೆಗಳನ್ನು ಬಡಜನರಿಗೆ ತಲುಪಿಸಿದ್ದಾರೆ.ಜಿಲ್ಲೆಯ ರಸ್ತೆಗಳು ಮುಂದಿನ ದಿನಗಳ ಮುಂದಾಲೋಚನೆಯಿಂದ ಕೂಡಿವೆ. ಇನ್ನು ಕುಡಿಯುವ ನೀರಿನ ವ್ಯವಸ್ಥೆಯಂತು ಅವರ ಪರಿಶ್ರಮ ದಿಂದ ಟಿವಿ ಸ್ಟೇಷನ್ ಕೆರೆ ಹಾಗೂ ಕುಂದುವಾದ ಕೆರೆ ನಿರ್ಮಿಸಿದ್ದಾರೆ.ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದರೂ ಸಹ ಅವು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಗಳಾಗಿವೆ, ಆದರೆ ಕೆಲವೊಂದು ಕೆಲಸಗಳು ಅಂದರೆ ವಿಮಾನ ನಿಲ್ದಾಣ ಇತ್ಯಾದಿಗಳು ಕೇಂದ್ರ ಸರ್ಕಾರದಿಂದ ಆಗಬೇಕಾದ ಕೆಲಸಗಳಾದ್ದರಿಂದ ದಾವಣಗೆರೆ ಜಿಲ್ಲೆಯಲ್ಲಿ ಈ ಸಾರಿ ಕಾಂಗ್ರೆಸ್ ಪಕ್ಷ ಗೆಲುವು ಪಡೆದರೆ  ಪ್ರಭಾ ಮಲ್ಲಿಕಾರ್ಜುನ್‌  ಜಿಲ್ಲೆಯನ್ನು ಅತ್ಯುತ್ತಮವಾಗಿ ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತದೆ ಎಂದರು.ನಿನ್ನೆ  ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದಾವಣಗೆರೆಯಲ್ಲಿ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಚಾರವನ್ನು ಮಾಡಿದ್ದಾರೆ ಲಕ್ಷಾಂತರ ಜನರು ಭಾಗವಹಿಸಿ ಬೆಂಬಲಿಸಿದ್ದಾರೆ.ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಬೆಂಬಲಿಸಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ, ಮುಖಂಡರಾದ ಕೆ.ಜಿ. ಶಿವಕುಮಾರ್, ಕೆ.ಎಂ. ಮಂಜುನಾಥ್,  ಹೆಚ್. ಮಂಜುನಾಥ್, ಎಂ. ಜಯಪ್ರಕಾಶ್, ಜಿ. ಚೌಡಪ್ಪ, ಅಲಾವುಲಿ ಮುಜಾಹಿದ್, ಗಿರಿಧರ್, ಬಿ. ಶಿವಕುಮಾರ್,, ದಿನೇಶ್, ಗೋಪಾಲ್, ಗೋವಿಂದ್ ಇನ್ನಿತರರು ಉಪಸ್ಥಿತರಿದ್ದರು.