ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ಯಶುಷ್ಕ ದಿನ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ
ಬೀದರ. ಮೇ. 05: ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ ಬೀದರ ಜಿಲ್ಲೆಯಲ್ಲಿ ಮೇ 7 ರಂದು ಮತದಾನ ಮತ್ತು ಜೂನ 4 ರಂದು ಮತ ಎಣಿಕೆ ನಡೆಯಲಿದೆ. ಬೀದರ ಲೋಕಸಭಾ ಮತಕ್ಷೇತ್ರದಲ್ಲಿ ಚುನಾವಣೆಯನ್ನು ನ್ಯಾಯಸಮ್ಮತ ಹಾಗೂ ನಿಸ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ, ಪ್ರಮುಖವಾಗಿ ಚುನಾವಣೆ ಸಮಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳು ಕೈಗೊಳ್ಳಬೇಕಾಗಿರುವುದರಿಂದ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135(ಸಿ) ಹಾಗೂ ಕರ್ನಾಟಕ ಅಬಕಾರಿ ನಿಯಮಗಳು 1967ರ ನಿಯಮ 10-ಬಿ ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲೆಯಾದ್ಯಂತ ಮತದಾನ ಪ್ರಯುಕ್ತ ಮೇ 5ರ ಸಾಯಂಕಾಲ 6 ಗಂಟೆಯಿಂದ ಮೇ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ಪ್ರಯುಕ್ತ ಜೂನ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ 4ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಅಬಕಾರಿ ಸನ್ನದುಗಳನ್ನು ಮುಚ್ಚಲು ಹಾಗೂ ಮಧ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಶುಷ್ಕ ದಿನವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಆದೇಶಿಸಿರುತ್ತಾರೆ.