ಆನೂರ ಗ್ರಾಮದ ಶ್ರೀ ಆದಿ ಬಸವೇಶ್ವರ ಮಂದಿರ ಉದ್ಘಾಟನೆ
ಅಫಜಲಪುರ: ಮೇ.5:ತಾಲೂಕಿನ ಆನೂರ ಗ್ರಾಮದಲ್ಲಿ ಶ್ರೀ ಆದಿ ಬಸವೇಶ್ವರ ಮಂದಿರ ಉದ್ಘಾಟನೆ, ನೂತನ ಮೂರ್ತಿ ಪ್ರತಿಷ್ಠಾಪನೆ, ನೂತನ ಕಳಸಾರೋಹಣ ಮತ್ತು ಪ್ರವಚನ ಹಾಗೂ ಧಾರ್ಮಿಕ ಸಭೆಯನ್ನು ಸೋ. ದಿ. ಮೇ 6 ರಿಂದ ದಿ. 10 ರ ವರೆಗೆ ವಿವಿಧ ಧಾರ್ಮಿಕ ಸಭೆ ಸಮಾರಂಭಗಳು ಜರುಗಲಿವೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಸೀತನೂರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂದಿರ ಉದ್ಘಾಟನೆ ಹಿನ್ನೆಲೆ ಪ್ರತಿದಿನ ರಾತ್ರಿ ಜೀವನ ದರ್ಶನ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಈ ಕಾರ್ಯಕ್ರಮಕ್ಕೆ ಈ ಭಾಗದ ವಿವಿಧ ಮಠಗಳ ಮಠಾಧೀಶರು, ರಾಜಕೀಯ ಮುಖಂಡರು, ಸಾಹಿತಿಗಳು, ಚಿಂತಕರು ಪಾಲ್ಗೊಳ್ಳಲಿದ್ದು ಜಿಲ್ಲೆಯ ಸಕಲ ಸದ್ಭಾಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಸದ್ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಿರುವುದಾಗಿ ತಿಳಿಸಿದ್ದಾರೆ.