ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ಬೇಕು
ಸಂಜೆವಾಣಿ ನ್ಯೂಸ್
ಮೈಸೂರು : ಮೇ.05:- ಶ್ರೀ ನಟರಾಜ ಸ್ನಾತಕೋತ್ತರ ಅಧ್ಯಯನ ಕೇಂದ್ರ (ಎಂ.ಕಾಂ.)ದಲ್ಲಿ ಕ್ರೀಡಾ ವೇದಿಕೆಯ ಸಮಾರೋಪ ಸಮಾರಂಭವು ಜರುಗಿತು. ಕಲೆ ಮತ್ತು ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಗೆ ಪೂರಕವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಉತ್ಸಾಹ, ಶಿಸ್ತು, ಕ್ರಿಯಾಶೀಲತೆಯನ್ನು ಉಂಟು ಮಾಡುವ ಸಾಧನೆಯಾಗಿದೆ. ಆದುದರಿಂದ ಎಲ್ಲಾ ವಿದ್ಯಾರ್ಥಿಗಳು ಕಲೆ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಗಳಾಗಿ ತಮ್ಮ ತಮ್ಮ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ. ಎಸ್. ಶಿವರಾಜಪ್ಪ ಕರೆಯಿತ್ತರು.
ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾರದ ಎಂ. ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಅವರ ಬದುಕು ಆರೋಗ್ಯಕರವಾಗಿರುತ್ತದೆ. ಆಟ, ಊಟ, ಓಟ ಎಂಬ ಮಾತಿನಂತೆ ವ್ಯಾಯಾಮ ಇಂದಿಗೂ ವಿದ್ಯಾರ್ಥಿಗಳ ಚಟುವಟಿಕೆಗಳಿಗೆ ಪೂರಕವಾಗಿರುತ್ತದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಅಧ್ಯಾಪಕರಾದ ಡಾ. ಶ್ರೀ ಶ್ರೀಕಾಂತ್, ಶ್ರೀ ಪವನ್ ರಾವ್ ಶ್ರೀಮತಿ ಲಕ್ಷ್ಮೀ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲ್ಲಿ ಕು. ರಂಜಿತಾ ಸ್ವಾಗತಿಸಿದರು, ಚಂದುಶ್ರೀ ಪ್ರಾರ್ಥಿಸಿದರೆ ಕು. ಶರತ್ ಕುಮಾರ್ ಸರ್ವರನ್ನು ವಂದಿಸಿ , ಕು. ಇಂದಿರಾ ಕಾರ್ಯಕ್ರಮವನ್ನು ನಿರೂಪಿಸಿದರು.