ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶೇಷ ಪೂಜೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.05:- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಗವಂತ ಧೀರ್ಘಾಯಸ್ಸು ಕರುಣಿಸಲಿ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ನಗರದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಆರ್ಚಕರು ಪ್ರಧಾನಿ ನರೆಂದ್ರ ಮೋದಿ ಅವರ ಹೆಸರಿನಲ್ಲಿ ಬಿಲ್ವಾರ್ಚನೆ, ಅಭಿμÉೀಕ, ಮಹಾ ಮಂಗಳಾರತಿ ಮಾಡಿದರು.
ಬಳಿಕ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ ಇಡೀ ವಿಶ್ವವೇ ಮೋದಿ ಅವರು ಮತ್ತೋಮ್ಮೆ ಪ್ರಧಾನಿಯಾಗಲಿ ಎಂದು ಎದುರು ನೋಡುತ್ತಿದೆ. ಆದರೆ ವಿರೋಧ ಪಕ್ಷಗಳು ಮೋದಿ ಅವರ ಏಳಿಗೆಯನ್ನು ಸಹಿಸುತ್ತಿಲ್ಲ. ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಮೋದಿ ಅವರು ಸಾಯಬೇಕು ಎಂಬರ್ಥದಲ್ಲಿ ಮಾತನಾಡಿರುವುದುದುರಂತ. ಇಂಥ ಮನಸ್ಥಿತಿಯುಳ್ಳ ವಿರೋಧ ಪಕ್ಷಗಳಿಗೆ ಒಳ್ಳೆಯ ಬುದ್ಧಿಯನ್ನು ಭಗವಂತ ನೀಡಲಿ. ಮೋದಿ ಅವರು ಮತ್ತೆ ಪ್ರಧಾನಿಯಾಗಲಿ. ಅವರಿಗೆ ಹೆಚ್ಚಿನ ಆಯಸ್ಸು, ಆರೋಗ್ಯವನ್ನು ಕರುಣಿಸಲಿ ಎಂದು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಜಿಲ್ಲಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ. ಶೈಲಾ, ಉಪಾಧ್ಯಕ್ಷೆ ದಾಕ್ಷಾಯಿಣಿ, ಕಾರ್ಯದರ್ಶಿ ವನಾಜಾಕ್ಷಿ, ಗ್ರಾಮಾಂತರ ಮಂಡಲ ಅಧ್ಯಕ್ಷೆ ಮಹೇಶ್ವರಿ ಕಾರ್ಯದರ್ಶಿ ರಾಧಾ ಮೊದಲಾದವರು ಇದ್ದರು.