ಮೇ 14 ರಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ; ಜಿಲ್ಲಾಧಿಕಾರಿ
ಗದಗ,ಮೇ4: ಮಲಪ್ರಭಾ ಜಲಾಶಯದಿಂದ (ಮಲಪ್ರಭಾ ಬಲದಂಡೆ ಕಾಲುವೆ ಹಾಗೂ ನರಗುಂದ ಶಾಖಾ ಕಾಲುವೆಗೆ) ಇದೇ ಮೇ 14 ರಿಂದ ನೀರು ಹರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದ್ದಾರೆ.
ನಗರದ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಸಂವಾದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ದೂರುಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ದೂರುಗಳು ಕೇಳಿ ಬರದಂತೆ ಗಮನ ಹರಿಸಬೇಕು ಎಂದರು.
ಜೂನ್ ಅಂತ್ಯದವರೆಗೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಗಮನ ಹರಿಸಬೇಕು. ಕುಡಿಯುವ ನೀರು ಪೂರೈಕೆಗೆ ಪ್ರಥಮಾದ್ಯತೆ ನೀಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ದೂರುಗಳೂ ಕೇಳಿಬರುತ್ತಿದ್ದು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಕುಡಿಯುವ ನೀರು ಪೂರೈಕೆಗೆ ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿ.ಪಂ.ಸಿಇಒ ಎಸ್. ಭರತ್ ಅವರು ಮಾತನಾಡಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಸಂಬಂಧ ತುರ್ತು ಕಾಮಗಾರಿಗಳಿಗೆ ಅನುಮೋದನೆ ಪಡೆದು ಕಾರ್ಯನಿರ್ವಹಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಹೆಚ್ಚುವರಿ ಪೆÇಲೀಸ ವರಿಷ್ಟಾಧಿಕಾರಿ ಸಂಕದ, ಜಿ.ಪಂ.ಉಪ ಕಾರ್ಯದರ್ಶಿ ಸಿ.ಬಿ.ದೇವರಮನಿ, ಜಿ.ಪಂ.ಎಂಜನಿಯರ್ಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಪುರಸಭೆ ಹಾಗೂ ಪ.ಪಂ.ಮುಖ್ಯಾಧಿಕಾರಿಗಳು ಇತರರು ಕುಡಿಯುವ ನೀರು ಸಂಬಂಧಿಸಿದಂತೆ ಮಾಹಿತಿ ನೀಡಿದರು.