ದೇಶದ ಹಿತಕ್ಕಾಗಿ ಬದಲಾವಣೆ : ವಿನಯಕುಮಾರ ಸೊರಕೆ
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.4 :ದೇಶದ ಹಿತಕ್ಕಾಗಿ ಈ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಪ್ರತಿಯೊಂದು ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯಕ್ಕೆ ತೆರಿಗೆ ಹಣ ಹಂಚಿಕೆಯಲ್ಲಿ ನ್ಯಾಯವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ. ಬರಗಾಲ ಸಂದರ್ಭದಲ್ಲಿ ಪರಿಹಾರ ಕೊಡದೆ ಇರುವುದು, ದ್ವೇಷ ಹರಡಿ ರಾಜಕೀಯ ಲಾಭವನ್ನು ಪಡೆದುಕೊಳ್ಳುವದನ್ನು ಬಿಜೆಪಿ ರೂಢಿ ಮಾಡಿಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಟೀಕಿಸಿದರು.
ಘೋಷಿತ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವುದರಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸದೃಢವಾಗಿದೆ. ಕೇಂದ್ರದಲ್ಲಿಯೂ ಮನಮೋಹನ ಸಿಂಗ್ ಅವರ ಸರ್ಕಾರ ಮಾಡಿದ ಸಾಧನೆ ನೋಡಿದರೆ ಈಗಿನ ಬಿಜೆಪಿ ಸರ್ಕಾರದ ಸಾಧನೆ ತೀರಾ ಕಡಮೆಯಾಗಿದೆ. ಬಿಜೆಪಿಯ ಸರ್ವಾಧಿಕಾರ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿಯವರು ಸುಳ್ಳು ಭರವಸೆಗಳನ್ನು ನೀಡುತ್ತ ಜನರ ಭಾವನೆ ಕೆರಳಿಸಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್‍ನ ಅತಿ ಹೆಚ್ಚು ಸಂಸದರು ಜಯಶಾಲಿಗಳಾಗಲಿದ್ದಾರೆ ಎಂದರು.
ರೈತರ, ಮಹಿಳೆಯರ, ಯುವಕರ ಹಾಗೂ ಶ್ರಮಿಕರ ಸಮಸ್ಯೆಗಳ ಬಗ್ಗೆ ನಾವು ಕೇಂದ್ರದ ಪ್ರಣಾಳಿಕೆಯಲ್ಲಿ ಮಾನ್ಯತೆ ನೀಡುತ್ತಿದ್ದೇವೆ ಎಂದು ಹೇಳಿದರು.
ಎಂಎಸ್‍ಪಿ, ನಿರುದ್ಯೋಗ ಯುವಕರಿಗೆ 2 ಕೋಟಿ ಉದ್ಯೋಗ ಕೊಡುವುದು, 15 ಲಕ್ಷ ರೂ ಕಪ್ಪುಹಣ ತರುವುದು ಸೇರಿದಂತೆ ಎಲ್ಲ ಆಶ್ವಾಸನೆ ಈಡೇರಿಸುವಲ್ಲಿ ನಮ್ಮ ಪ್ರಧಾನಿಗಳು ವಿಫಲರಾಗಿದ್ದಾರೆ. ಇವರ ಸಾಧನೆ ಶೂನ್ಯವಾಗಿದೆ. ಇಂದಿನ ಯುವಪೀಳಿಗೆ ಎಲ್ಲವನ್ನು ಅರಿತಿದ್ದು, ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.
ವಿಜಯಪುರ ಜಿಲ್ಲೆಯ ಹಿಂದಿನ ಬಿಜೆಪಿ ಸಂಸದರು ಒಂದೂ ಸಲ ಸಂಸತ್‍ನಲ್ಲಿ ಮಾತನಾಢಿಲ್ಲ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸ್ಮಾರ್ಟ್‍ಸಿಟಿ, ದತ್ತು ಗ್ರಾಮದಂತಹ ಯೋಜನೆ ಅನುಷ್ಠಾನಗೊಳಿಸಿಲ್ಲ. 3 ಬಾರಿ ಸಂಸದರಾದರೂ ಕೇವಲ ಮೋದಿ ಹೆಸರು ಹೇಳಿ ಆರಿಸಿ ಬಂದು ಜಿಲ್ಲೆಯ ಜನತೆಗೆ ದ್ರೋಹ ಬಗೆದಿದ್ದಾರೆ. ನೀರಾವರಿಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಪ್ರವಾಸೋದ್ಯಮ ಬೆಳವಣಿಗೆ ಆಗಿಲ್ಲ, ಬರ ಹಣೆಪಟ್ಟಿ ಅಳಿಸುವಲ್ಲಿ ವಿಫಲರಾದ ಜಿಗಜಿಣಗಿ ಮತ್ತೇ ಮೋದಿ ಮುಖ ನೋಡಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ನಾವು ವಿಜಯಪುರದಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ನೀಡಿದ್ದೇವೆ. ವಿಜಯಪುರದ ಅಭಿವೃದ್ಧಿ ಮಾಡುವುದೆ ಮುಖ್ಯ ಗುರಿಯಾಗಿದೆ. ರಾಜ್ಯದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಬಿಜೆಪಿಯ ಶೇ.10 ರಿಂದ 15 ರಷ್ಟು ಮತಗಳನ್ನು ನಾವು ಹೆಚ್ಚು ತೆಗೆದುಕೊಳ್ಳಲಿದ್ದೇವೆ. 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಸನ್ನಿವೇಶ ಇದೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರೆ ಹಾಗೂ ಮಾಜಿ ಸಂಸದೆÀ ತೇಜಶ್ವಿನಿ ಗೌಡ ಅವರು ಮಾತನಾಡಿ, ರಾಜ್ಯದಲ್ಲಿ ನಾವು ನುಡಿದಂತೆ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದು, ಇದು ರಾಜ್ಯದ ಪ್ರತಿಯೊಬ್ಬರಿಗೂ ಪ್ರತಿ ಮನೆಗೂ ಯೋಜನೆಗಳು ತಲುಪುತ್ತಿವೆ ನುಡಿದರು.
ದೇವೆಗೌಡರು ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವ ಭರದಲ್ಲಿ ಜೆಡಿಎಸ್ ಅಸ್ತಿತ್ವವನ್ನೇ ಅಳಿಸಿ ಹಾಕಿದ್ದಾg ಎಂದು ಸೊರಕೆ ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದರಫೀಕ ಟಪಾಲ, ಕೆಪಿಸಿಸಿ ಸದಸ್ಯ ಅಬ್ದುಲ್‍ಹಮೀದ ಮುಶ್ರೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರುಕ್ಸಾನಾ ಉಸ್ತಾz, ಐ.ಎಂ. ಇಂಡಿಕರ ಇದ್ದರು.