ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ-2024 ದೂರು ಮೇಲ್ವಿಚಾರಣಾ ಕೋಶ ಪ್ರಾರಂಭ
ಕಲಬುರಗಿ:ಮೇ.3:ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ-2024ರ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಲಿಖಿತವಾಗಿ ಅಥವಾ ದೂರವಾಣಿ ಮೂಲಕ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ದೂರು ಮೇಲ್ವಿಚಾರಣಾ ಕೋಶವನ್ನು ತೆರೆಯಲಾಗಿದೆ.
ಈ ದೂರು ನಿರ್ವಹಣಾ ಕೋಶವು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 08472-200255 ಮೂಲಕ ತಮ್ಮ ದೂರನ್ನು ಸಲ್ಲಿಸಬೇಕು. ಇದಲ್ಲದೇ ಲಿಖಿತವಾಗಿಯು ಸಹ ದೂರು ಸಲ್ಲಿಸಬಹುದಾಗಿದೆ ಎಂದು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೃಷ್ಣ ಭಾಜಪೇಯಿ ಅವರು ತಿಳಿಸಿದ್ದಾರೆ.