ರೈಲ್ವೆ, ಬಸ್ ಗಳಲ್ಲಿ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ
ಸೇಡಂ,ಮೇ,03: ಪಟ್ಟಣದ ರೈಲ್ವೆ ನಿಲ್ದಾಣದ ರೈಲ್ವೆಗಳಲ್ಲಿ, ಬಸ್ ಸ್ಟ್ಯಾಂಡ್ ನಲ್ಲಿರುವ ಬಸ್ ಗಳಲ್ಲಿ ಹಾಗೂ ವಿವಿಧ ಬಡಾವಣೆಗಳಲ್ಲಿರುವ ಮನೆ ಮನೆಗೆ ತೆರಳಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಜಾಥಾ ಮೂಲಕ ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಲು ಮತದಾನ ಜಾಗೃತಿ ಚೀಟಿ ನೀಡಿ ಸಾರ್ವಜನಿಕರಿಗೆ ಮನವರಿಕೆ ತಾಲೂಕ ಸ್ವೀಪ್ ಸಮಿತಿಯ ಅಧಿಕಾರಿಗಳು ಮಾಡಿ ಕೊಟ್ಟರು.ಈ ವೇಳೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಆಶಪ್ಪ ಪೂಜಾರಿ, ತಹಶೀಲ್ದಾರ್ ಶಿವಾನಂದ ಮೇತ್ರೆ ತಾಪಂ ಇಓ ಚನ್ನಪ್ಪ ರಾಯಣ್ಣನವರ, ಚುನಾವಣಾ ಮಹಿಳಾ ಸಿಂಬಂಧಿ ವರ್ಗದವರ ನೋಡೆಲ್ ಅಧಿಕಾರಿಗಳಾದ ವಿಜಯಲಕ್ಷ್ಮಿ ಅವಟೆ, ಪುರಸಭೆ ಮುಖ್ಯಾಧಿಕಾರಿ ಶರಣಯ್ಯ ಸ್ವಾಮಿ, ಡಾ. ಸಂಜೀವಕುಮಾರ ಪಾಟೀಲ್, ಹಿರಿಯ ಆರೋಗ್ಯ ನಿರೀಕ್ಷಕ ಶಿವಯೋಗಿ ಸಕ್ಪಾಲ್, ಸರ್ಕಾರಿ ನೌಕರರ ಅಧ್ಯಕ್ಷ ಶಿವಶಂಕರಯ್ಯ ಸ್ವಾಮಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.