ಹಲ್ಲೆ: 12 ಜನರ ಬಂಧನ
ಕಲಬುರಗಿ,ಮೇ.3-ಕೋಟನೂರ (ಡಿ) ಗ್ರಾಮದಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ 12 ಜನ ಆರೋಪಿಗಳನ್ನು ವಿಶ್ವವಿದ್ಯಾಲಯ ಪೊಲೀಸರು ಬಂಧಿಸಿದ್ದಾರೆ.
ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗಮೇಶ ಮಾಲಿ ಪಾಟೀಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ವಿಷಯ ತಿಳಿದು 20 ರಿಂದ 30 ಜನ ಸೇರಿ ತಮ್ಮ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಂಗಮೇಶ ಮಾಲಿ ಪಾಟೀಲ ಸಹೋದರ ಅನೀಲಕುಮಾರ ಮಾಲಿಪಾಟೀಲ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ವಿಶ್ವವಿದ್ಯಾಲಯ ಪೊಲೀಸರು ತನಿಖೆ ನಡೆಸಿ 12 ಜನ ಆರೋಪಿಗಳನ್ನು ಬಂಧಿಸಿದ್ದಾರೆ.