ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ
ಕಲಬುರಗಿ,ಮೇ.3-ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ.
ಲಾಡ್ ಮುಗಳಿ ಗ್ರಾಮದ ನಿಖಿಲ್ ಪೂಜಾರಿ (23) ಆತ್ಮಹತ್ಯೆಗೆ ಶರಣಾಗಿರುವ ಯುವಕ.
ಇತ್ತೀಚೆಗೆ ಲಾಡಮುಗುಳಿ ಗ್ರಾಮದಲ್ಲಿ ನಡೆದ ಜಾತ್ರೆ ವೇಳೆ ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಾದ ಬಳಿಕ ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ನರೋಣಾ ಪೆÇಲೀಸ್ ಠಾಣೆಯಲ್ಲಿ ಇನ್ನೊಂದು ಸಮುದಾಯದ ಯುವಕರು ದೂರು ನೀಡಿದ್ದರು. ಏ.27 ರಂದು ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್ ಪೂಜಾರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.