ಚುನಾವಣೆಯನ್ನು ಹಬ್ಬದಂತೆ ಆಚರಿಸಬೇಕು: ಪ್ರೊ. ಯಡಹಳ್ಳಿ
ವಿಜಯಪುರ,ಮೇ.3: ಭಾರತದಂತಹ ದೊಡ್ಡ ದೇಶದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯನ್ನು ಪ್ರತಿಯೊಬ್ಬರೂ ಹಬ್ಬದಂತೆ ಆಚರಿಸಬೇಕು ಎಂದು ನಗರದ ಸಿಕ್ಯಾಬ್ ಎ.ಆರ್.ಎಸ್ ಇನಾಮದಾರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಪೆÇ್ರ. ಹನುಮಂತ ಯಡಹಳ್ಳಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಕೋಶ, ಜಿಲ್ಲಾಡಳಿತದ ಸ್ವೀಪ್ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಮತದಾನ ಜಾಗೃತಿ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನಿಂದ ಇಂದಿನವರೆಗೆ ಮತದಾನದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆಗಳು ಕಂಡು ಬಂದಿದೆ. ಪ್ರಜಾಪ್ರಭುತ್ವವು ಯಾವುದೆ ಭೇದವಿಲ್ಲದೆ ಎಲ್ಲರೂ ಮತದಾನ ಮಾಡಬಹುದು ಮತ್ತು ರಾಜಕೀಯದಲ್ಲಿ ಬದಲಾವಣೆ ತರುವ ಶಕ್ತಿ ಮತದಾರರಿಗಿದೆ ಎಂದು ಹೇಳಿದರು.
ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಾಗ ಮಾತ್ರ ನಾವು ನಮ್ಮ ಹಕ್ಕುಗಳನ್ನು ಕೇಳಲು ಸಾಧ್ಯ. ಮತದಾನ ಮಾಡಲು ನಿರಾಸಕ್ತಿ ಮತ್ತು ನಿμÁ್ಕಳಜಿ ತೋರದೆ ನಮ್ಮ ದೇಶದಲ್ಲಿ ಏನು ನಡೆಯುತ್ತಿದೆ. ನಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮತದಾನ ಮಾಡುವ ಮೂಲಕ ಧ್ವನಿಯನ್ನು ಎತ್ತಬೇಕು ಎಂದರು.
ನಾವು ಹೆಚ್ಚು ಮತದಾನ ಮಾಡಿದರೆ ನಾವು ಪರಿಪೂರ್ಣ ರಾಜಕೀಯರಾಗಲು ಸಾಧ್ಯ ಎಂದು ಹೇಳುತ್ತಾ, ಸಾಮಾಜಿಕ ಪ್ರಕ್ರಿಯೆಗಳಿಂದ ದೂರ ಉಳಿದ ಸಮುದಾಯಗಳನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಮತದಾನ ಸಂಬಂಧಿತ ರಸಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿನಿಯರಿಗೆ ಸಾಕಷ್ಟು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವಿಯ ಮೌಲ್ಯಮಾಪನ ಕುಲಸಚಿವ ಪೆÇ್ರ. ಹೆಚ್.ಎಮ್. ಚಂದ್ರಶೇಖರ ಮಾತನಾಡಿ, ಯಾವುದೇ ವ್ಯಕ್ತಿಯನ್ನು ಗೆಲ್ಲಿಸಲು ನಾವು ಪ್ರಜ್ಞೆಯಿಂದ ಮತದಾನ ಮಾಡಬೇಕು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಪ್ರಾಮಾಣಿಕವಾಗಿ ಮತ ಚಲಾಯಿಸಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಅದನ್ನು ನೀವು ಯೋಗ್ಯವಾಗಿ ತಿಳಿದು ನಿಮ್ಮ ಸ್ವ ಇಚ್ಛೆಯಿಂದ ಮತದಾನ ಮಾಡಬೇಕು ಮತ್ತು ಮತದಾನದ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಪೆÇ್ರ. ಶಾಂತಾದೇವಿ ಮತ್ತು ಪ್ರಜಾಪತಿ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.