ಕಾವೇರಿ ಕಾಲೇಜಿನ 80ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ
ಸಂಜೆವಾಣಿ ನ್ಯೂಸ್
ಮೈಸೂರು::ಸೆ.22:– ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದೆ ಬರುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕು’ ಕಾಲೇಜಿನ ಆಡಳಿತ ಅಧಿಕಾರಿ ಡಾ.ಸಿ.ಇ.ಸುಬ್ರಮಣ್ಯ ಹೇಳಿದರು.
ಕುವೆಂಪು ನಗರದಲ್ಲಿರುವ ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಪ್ರತಿ ವರ್ಷದಂತೆ 80ಕ್ಕೂ ಹೆಚ್ಚ ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತ ಹೀನತೆ, ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳನ್ನು ನಿಭಾಯಿಸಲು ರಕ್ತ ಸಂಗ್ರಹದ ಅಗತ್ಯವಿರುತ್ತದೆ. ಹೀಗಾಗಿ ಪರೋಪಕಾರದ ಉದ್ದೇಶವುಳ್ಳ ಇಂತಹ ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪ್ರಾಂಶುಪಾಲರಾದ ಕೆ.ಎಂ.ಪದ್ಮಾವತಿ,ರೆಡ್ ಕ್ರಾಸ್ ಸೊಸೈಟಿ ಸಂಯೋಜಕಿ ಸಿ.ಸೋನಾಕ್ಷಿ, ಸುರೇಶ್, ಹಾಗೂ ಕಾಲೇಜಿನ ಶಿಕ್ಷಕ ವೃದ್ಧ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.