ಮತದಾನ ಮಾಡದಿರುವ ವ್ಯಕ್ತಿಗೆ ಪ್ರಶ್ನಿಸುವ ಅರ್ಹತೆ ಇರುವುದಿಲ್ಲ
ಸಂಜೆವಾಣಿ ವಾರ್ತೆ
ಸಂಡೂರು: ಮೇ: 3: ಪ್ರತಿ ಚುನಾವಣೆಗಳು ಪ್ರಜಾತಂತ್ರದ ಉತ್ಸವಗಳಾಗಿದ್ದು ದೇಶದ ಪ್ರಗತಿಯ ದಿಕ್ಕನ್ನು ಬದಲಾಯಿಸುವ ಶಕ್ತಿ ನಮ್ಮ ಮತದಾನಕ್ಕಿದ್ದು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತವನ್ನು ಚಲಾಯಿಸುವ ಮೂಲಕ ಪ್ರಶ್ನೆ ಮಾಡುವ ಅರ್ಹತೆ ಹೊಂದಲು ಸಾಧ್ಯ ಎಂದು ಸಂಡೂರು ಲೋಕಸಭಾ ಚುನಾವಣೆ 2024ರ ಸಹಾಯಕ ಚುನಾವಣಾ ಅಧಿಕಾರಿ ಸತೀಶ್ ಅವರು ಅಭಿಪ್ರಾಯ ಪಟ್ಟರು.
ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಬಳ್ಳಾರಿ, ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಸಂಡೂರು ಹಾಗೂ ಎನ್ ಎಂ ಡಿ ಸಿ ಧೋಣಿಮಲೈ ಇವರುಗಳ ಸಹಯೋಗದಲ್ಲಿ ಗುರುವಾರ ಧೋಣಿಮಲೈ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದ ಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಧೋಣಿಮಲೈನಲ್ಲಿ ಅತಿ ಕಡಿಮೆ ಮತದಾನವಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನ್ ಎಂ ಡಿ ಸಿ ಯ ಎಲ್ಲಾ ಸಿಬ್ಬಂದಿಗಳು ಹಾಗೂ ನಾಗರಿಕರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಹೇಳಿದರು..
ಕಾರ್ಯಕ್ರಮ ದಲ್ಲಿ ಸಂಡೂರು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಎಚ್ ಷಡ ಕ್ಷರಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಮತ ನಮ್ಮ ಸುರಕ್ಷೆಯಾಗಿದ್ದು ಸಂಡೂರು ತಾಲೂಕಿನಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ವಾಗುವಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶ್ರಮಿಸಲಾಗುತ್ತಿದ್ದು ಧೋಣಿ ಮಲೈನಲ್ಲಿ ಮತದಾನ ಪ್ರಮಾಣ ಹೆಚ್ಚಳ ವಾಗುವಲ್ಲಿ ಏನ್ ಎಂ ಡಿ ಸಿ ಸಿಬ್ಬಂದಿಯವರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಹಕರಿಸಬೇಕು ಎಂದು ತಿಳಿಸಿದರು. ತಾಲೂಕು ದಂಡಾಧಿಕಾರಿ ಶ್ರೀ ಅನಿಲ್ ಕುಮಾರ್ ಇವರು ಮಾತನಾಡಿ ನಮ್ಮ ಮತ ಸದೃಢ ಭಾರತ ನಿರ್ಮಾಣಕ್ಕೆ ಆಧಾರವಾಗಿದ್ದು ನಾವುಗಳು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜ್ಞಾವಂತಿಕೆಯನ್ನು ಮೆರೆಯಬೇಕಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಓಒಆಅ ಸೀನಿಯರ್ ಮ್ಯಾನೇಜರ್ ಸಿದ್ದಿ ಬಾಬು ಇವರು ನಮ್ಮ ಮತ ನಮ್ಮ ಹಕ್ಕು ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ , ಬಳ್ಳಾರಿಯ ಚಿಗುರು ತಂಡದವರು ಜಾಗೃತಿ ನಾಟಕ ಹಾಗೂ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಅಕ್ಕಿ , ಏನ್ ಎಂ ಡಿ ಸಿ ಯೂನಿಯನ್ ಉಪಾಧ್ಯಕ್ಷ ತಿಪ್ಪೇಸ್ವಾಮಿ ಭಾಗವಹಿಸಿದ್ದರು. ನರಸಿಂಗಾಪುರ ಗ್ರಾಮ ಪಂಚಾಯಿತಿ ಪಿಡಿಒ ಹನುಮಂತಪ್ಪ , ಸಿಬ್ಬಂದಿ ಗಣೇಶ್, ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಎಂಕಪ್ಪ, ಉಪಸ್ಥಿತರಿದ್ದರು. ಚಿಗುರು ಕಲಾತಂಡದ ಹುಲುಗಪ್ಪ ಪ್ರಾರ್ಥಿಸಿದರು. ನರಸಿಂಗಾಪುರ ಪಿಡಿಓ ಉಪ್ಪಾರ ಹನುಮಂತಪ್ಪ ಸ್ವಾಗತಿಸಿದರು.ಶಿಕ್ಷಕ ಜಿ. ಎಮ್. ಪ್ರದೀಪ್ ಕುಮಾರ್ ಮತದಾರ ಪ್ರತಿಜ್ಞಾವಿಧಿ ಬೋಧಿಸಿ ಕಾರ್ಯಕ್ರಮ ನಿರ್ವಹಿಸಿದರು. S ಗಣೇಶ್ ವಂದಿಸಿದರು..ನವಲಟ್ಟಿ, ಆಕಾಶ್ ನಗರ, ನರಸಿಂಗಾಪುರ ಹಾಗೂ ರಣಜಿತ್ ಪುರದ ಸ್ವ ಸಹಾಯ ಸಂಘಗಳ ಸದಸ್ಯರು, ಏನ್ ಎಂ ಡಿ ಸಿ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.