ಕಡ್ಡಾಯ ಮತದಾನ ಮಾಡಲು ಕರೆ
ಸಂಜೆವಾಣಿ ವಾರ್ತೆ
ಸಂಡೂರು:ಮೇ: 3:  ಪ್ರತಿಯೊಬ್ಬರೂ ಮತದಾನ ಮಾಡಬೇಕು ಅದಕ್ಕಾಗಿ ತಾಲೂಕು ಸ್ವೀಪ್ ಸಮಿತಿ ಮಹಿಳಾ ಮತ್ತು ಮಕ್ಕಳ ಇಲಾಖೆಯು ಎಲ್ಲಿ ಕಡಿಮೆ ಮತದಾನವಾಗಿದೆ ಅಲ್ಲಿ ಜಾಗೃತಿ ಉಂಟುಮಾಡುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡುತ್ತಿದ್ದು ಪ್ರತಿಯೊಬ್ಬರೂ ಸಹ ಮತಗಟ್ಟೆಗೆ ಬಂದು ಮತದಾನ ಮಾಡಿ ಎಂದು ಶಿಶು ಅಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕ ಎಳೆನಾಗಪ್ಪ ಕರೆನೀಡಿದರು.
ಅವರು ಇಂದು ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಡೂರು ಪಟ್ಟಣದ ಮತಗಟ್ಟೆ ಸಂಖ್ಯೆ 49ರಲ್ಲಿ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನ ಮಾಡಿರುವ ಪ್ರಯುಕ್ತ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಬೆ ವತಿಯಿಂದ, ಶಿಶು ಅಭಿವೃದ್ಧಿ ಯೋಜನಾಧಿಕಾರಗಳ ಕಚೇರಿಯ ಮೇಲ್ವಿಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ, ಹೆಚ್ ಷಡಾಕ್ಷರಯ್ಯ ತಾ.ಪಂ ಸಂಡೂರು ರವರ ಮಾರ್ಗದರ್ಶನದಲ್ಲಿ ಶ್ರೀ ಜಯಣ್ಣ ಪುರಸಭೆ ಮುಖ್ಯ ಅಧಿಕಾರಿ ಇವರು ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಮತ್ತು ಇತರರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ಕರೆನೀಡಿದರು. ಈ ಕಾರ್ಯಕ್ರಮದಲ್ಲಿ ಹಾಗೂ ಮತದಾನ ಪ್ರತಿಜ್ಞಾ ವಿಧಿಯನ್ನು ಕೈಗೊಂಡರು , ಸಿ.ಡಿ.ಪಿ.ಓ, ಎಳೆ ನಾಗಪ್ಪ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಂಡೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.