20 ಲೀ. ಕಲಬೆರಿಕೆ ಸೇಂದಿ ಜಪ್ತಿ
ಯಾದಗಿರಿ : ಮೇ 02 : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಘೋಷಿಸಿ, 2024ರ ಮಾರ್ಚ 16 ರಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣೆ ಶಾಂತಿಯುತವಾಗಿ ನಿಷ್ಪಕ್ಷಪಾತವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಜಿಲ್ಲೆಯ ವ್ಯಾಪ್ತಿಯಲ್ಲಿ ನಕಲಿ ಮದ್ಯ, ಅಕ್ರಮ ಮದ್ಯ, ಕಲಬೆರಕೆ ಸೇಂದಿ, ಕಳ್ಳಭಟ್ಟಿ ಸಾರಾಯಿ ಹಾಗೂ ಇತರೆ ಅಬಕಾರಿ ಅಕ್ರಮ ಪದಾರ್ಥಗಳ ತಯಾರಿಕೆ ಸಾಗಾಣಿಕೆ ಸಂಗ್ರಹಣೆ ಹಾಗೂ ಮಾರಾಟಗಳಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಕೈಗೊಂಡಿರುವ ಮಾಹಿತಿ ಸಲ್ಲಿಸಲಾಗಿದೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತೆ ಶಾರದಾ ಸಿ.ಕೋಲಕಾರ ಅವರು ತಿಳಿಸಿದ್ದಾರೆ.