ಕೋಟನೂರ ಘಟನೆಕಾನೂನು ಕೈಗೆತ್ತಿಕೊಂಡವರ ಮೇಲೆ ಸೂಕ್ತ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ,ಮೇ.2-ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನು ಕೈಗೆತ್ತಿಕೊಂಡವರನ್ನು ಈಗಾಗಲೇ ಪೆÇಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾರ್ವಜನಿಕರು ಯಾವುದೇ ಕಾರಣಕ್ಕೂ ಭಾವೋದ್ವೇಗಕ್ಕೆ ಒಳಗಾಗದಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂದಪಟ್ಟವರನ್ನು ಈಗಾಗಲೇ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಪೆÇಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಯಾರೊಬ್ಬರು ಆತಂಕಕ್ಕೊಳಗಾಗಬಾರದು. ಕಾನೂನು ವ್ಯಾಪ್ತಿ ಮೀರಿ ನಡೆದುಕೊಳ್ಳುವವರು ಯಾರೇ ಆಗಿರಲಿ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.